ಲೋಕಸಭಾ ಚುನಾವಣೆ ಹಿನ್ನೆಲೆ – ಇನ್ನು 72 ಗಂಟೆ ಎಣ್ಣೆ ಸಿಗಲ್ಲ ಗುರು…!

ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಗೆ ಇನ್ನು ಕೇವಲ 2 ದಿನಗಳು ಮಾತ್ರ ಬಾಕಿ ಇವೆ. ಈ ಹಿನ್ನೆಲೆ ಇಂದಿನಿಂದ ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಇಂದು ಸಂಜೆ 6 ರಿಂದ ಏಪ್ರಿಲ್ 19ರ ಬೆಳಗ್ಗೆ 6ರ ವರೆಗೆ ನಿಷೇಧ ಮಾಡಲಾಗಿದೆ. ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ಮತ್ತು ಸಂಗ್ರಹಿಸುವವರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

Share Post

Leave a Reply

Your email address will not be published. Required fields are marked *

error: Content is protected !!