ಅಕಾಲಿಕ ಮಳೆ, ಧೂಳಿನ ಚಂಡಮಾರುತ: ಗುಜರಾತ್ ನಲ್ಲಿ 35 ಸಾವು

ಗುಜರಾತ್ ನಲ್ಲಿ ಕಳೆದ 2 ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಗೆ ಈವರೆಗೆ 35 ಮಂದಿ ಸಾವಿಗೀಡಾಗಿದ್ದಾರೆ. ಮಳೆಗೆ ಹಲವರು ಗಾಯಗೊಂಡಿದ್ದಾರೆ. ಉತ್ತರ ಗುಜರಾತ್ ಮತ್ತು ಸೌರಾಷ್ಟ್ರ ಪ್ರಾಂತ್ಯದಲ್ಲಿ ಕಳೆದ 2 ದಿನಗಳಿಂದ ಸುರಿದ ಅಕಾಲಿಕ ಮಳೆ ಹಾಗೂ ಧೂಳು ಸಹಿತ ಚಂಡಮಾರುತ ಭಾರಿ ಅವಾಂತರವನ್ನೇ ಸೃಷ್ಟಿ ಮಾಡಿದೆ.
ಉತ್ತರ ಗುಜರಾತ್ ಭಾಗದಲ್ಲೇ ಅತೀ ಹೆಚ್ಚಿನ ಪ್ರಮಾಣದಲ್ಲಿ ಸಾವು ಸಂಭವಿಸಿದೆ. ಗುಡುಗು ಮತ್ತು ಮಿಂಚಿನಿಂದಾಗಿ ಹತ್ತಾರು ಮರಗಳು, ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.  ಸಂತ್ರಸ್ಥರಿಗೆ ಪ್ರಧಾನಿ ಮೋದಿ ಪರಿಹಾರ ಘೋಷಣೆ ಮಾಡಿದ್ದಾರೆ. ರಕ್ಷಣಾ ಕಾರ್ಯಾಚರಣೆಯೂ ಭರದಿಂದ ಸಾಗಿದೆ. 

Share Post

Leave a Reply

Your email address will not be published. Required fields are marked *

error: Content is protected !!