ಆನಂದ್ ಸಿಂಗ್ ಮೇಲಿನ ಹಲ್ಲೆ ಪ್ರಕರಣ –ಕಂಪ್ಲಿ ಗಣೇಶ್ ಗೆ ಜಾಮೀನು

ಕಂಪ್ಲಿ ಶಾಸಕ ಜಿ.ಎನ್​ ಗಣೇಶ್​ಗೆ ಕೊನೆಗೂ ಜಾಮೀನು ದೊರೆತಿದೆ. ಬಳ್ಳಾರಿಯ ವಿಜಯನಗರ ಶಾಸಕ ಆನಂದ್​ ಸಿಂಗ್​ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಜೈಲಿನಲ್ಲಿದ್ದ ಕಂಪ್ಲಿ ಗಣೇಶ್​ಗೆ ಹೈಕೋರ್ಟ್​ ಏಕ ಸದಸ್ಯ ಪೀಠ ಷರತ್ತು ಬದ್ಧ  ಜಾಮೀನು ಮಂಜೂರು ಮಾಡಿದೆ. ಈಗಲ್​ಟನ್​ ರೆಸಾರ್ಟ್​ನಲ್ಲಿ ಶಾಸಕ ಆನಂದ್​ ಸಿಂಗ್​ ಮೇಲೆ ಹಲ್ಲೆ ಮಾಡಿ ಎಸ್ಕೇಪ್​ ಆಗಿದ್ದ ಗಣೇಶ್​ರನ್ನ ಫೆಬ್ರವರಿ 20 ರಂದು ಅಹಮದಾಬಾದ್​ನಲ್ಲಿ ಬಂಧಿಸಲಾಗಿತ್ತು. ನಂತರ ಗಣೇಶ್​ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕಾರವಾಗಿತ್ತು. ಇದನ್ನ ಪ್ರಶ್ನಿಸಿ ಹೈ ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿ ಹೈ ಕೋರ್ಟ್​ ಎರಡೂ ಕಡೆಯ ವಕೀಲರ ವಾದ ಆಲಿಸಿ ಆದೇಶವನ್ನ ಕಾಯ್ದಿರಿಸಿತ್ತು.

Share Post

Leave a Reply

Your email address will not be published. Required fields are marked *

error: Content is protected !!