ಕಂಪ್ಲಿ ಗಣೇಶ್ ವಿರುದ್ಧದ ಆನಂದ್ ಸಿಂಗ್ ಸಿಟ್ಟು ತಣ್ಣಗಾಯ್ತಾ..?

ಆನಂದ್ ಸಿಂಗ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ತಾನೇ ಜೈಲಿನಿಂದ ಹೊರ ಬಂದಿರುವ ಕಂಪ್ಲಿ ಶಾಸಕ ಜೆ.ಎನ್.ಗಣೇಶ್​, ವಿಜಯನಗರ ಶಾಸಕ ಆನಂದ್​ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ. ಹೊಸಪೇಟೆಯ  ವೇಣುಗೋಪಾಲ ದೇವಸ್ಥಾನದಲ್ಲಿ ಭೇಟಿ ಮಾಡಿದ ಗಣೇಶ್, ಆನಂದ ಸಿಂಗ್ ಅವರ ತಂದೆ ಪೃಥ್ವಿರಾಜ್‌ ಸಿಂಗ್​​ ಕಾಲು ಮುಟ್ಟಿ ನಮಸ್ಕರಿಸಿದ್ದಾರೆ. ಅಲ್ಲದೇ, ನನ್ನಿಂದ ತಪ್ಪಾಗಿದೆ ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡಿದ್ದಾರೆ  

ನಂತರ ಹೊಸಪೇಟೆಯ ಪಟೇಲ್ ನಗರದಲ್ಲಿರುವ ಕೃಷ್ಣಾ ಮಂದಿರದಲ್ಲಿ ಆನಂದ್​ ಸಿಂಗ್ ಹಾಗೂ ಗಣೇಶ್ ನಡುವೆ ಒಂದು ಗಂಟೆಗೂ ಹೆಚ್ಚು ಹೊತ್ತು ಮಾತುಕತೆ ನಡೆದಿದೆ ಎನ್ನಲಾಗಿದೆ. ಆನಂದ್ ಸಿಂಗ್ ಪರಮಾಪ್ತ ಸಮೀವುಲ್ಲಾ ಮಧ್ಯಸ್ಥಿಕೆಯಿಂದ ಉಭಯ ನಾಯಕರ ಭೇಟಿ ಸಾಧ್ಯವಾಗಿದೆ.

Share Post

Leave a Reply

Your email address will not be published. Required fields are marked *

error: Content is protected !!