ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿಗೆ ಹಿನ್ನಡೆ – ಗುಪ್ತಚರ ಇಲಾಖೆ ವರದಿ

ಗುಪ್ತಚರ ಇಲಾಖೆ ವರದಿಯ ಪ್ರಕಾರ ಮಂಡ್ಯದಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಹಿನ್ನಡೆಯಾಗಿದೆ. ಈ ಕುರಿತಂತೆ ಸಿಎಂ ಕುಮಾರಸ್ವಾಮಿ ಜೆಡಿಎಸ್ ಶಾಸಕರ ವಿರುದ್ಧ ತೀವ್ರ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ಮಳವಳ್ಳಿ, ಮದ್ದೂರು, ಮಂಡ್ಯ ಕ್ಷೇತ್ರದಲ್ಲಿ ನಿಖಿಲ್ ಗೆ ಹಿನ್ನಡೆಯಾಗೋ ಸಾಧ್ಯತೆ ಇದೆ. ಅಂಬರೀಶ್ ತವರು ಮದ್ದೂರಿನ ಎಲ್ಲಾ ಹೋಬಳಿಗಳಲ್ಲಿ ನಿಖಿಲ್ ಗೆ ಹಿನ್ನಡೆಯಾಗಲಿದೆ ಎಂದು ಗುಪ್ತಚರ ಇಲಾಖೆ ವರದಿ ನೀಡಿದೆ. ಮಂಡ್ಯ ನಗರದಲ್ಲಿಯೂ ನಿಖಿಲ್ ಗೆ ಹಿನ್ನಡೆಯಾಗಲಿದೆ.

ಕಾಂಗ್ರೆಸ್ ಮುಖಂಡರನ್ನ ವಿಶ್ವಾಸಕ್ಕೆ ಪಡೆಯುವಲ್ಲಿ ಜೆಡಿಎಸ್ ಶಾಸಕರು ವಿಫವಾಗಿದ್ದಾರೆ ಎಂದು ಕುಮಾರಸ್ವಾಮಿ ಆಕ್ರೋಶವ್ಯಕ್ತಪಡಿಸಿದ್ದಾರೆ. ಗುಪ್ತಚರ ಇಲಾಖೆ ವರದಿಯಿಂದ ಜೆಡಿಎಸ್ ವಲಯದಲ್ಲಿ ತಲ್ಲಣ ಸೃಷ್ಟಿಯಾಗಿರೋದು ನಿಜ.

Share Post

Leave a Reply

Your email address will not be published. Required fields are marked *

error: Content is protected !!