ಐಟಿ ದಾಳಿಗೇ ಹೆದರಿಲ್ಲ, ಇನ್ನು ಕಣ್ಣೀರು ಹಾಕಿ ಓಟು ಕೇಳುತ್ತೇನಾ…?

ಹುಬ್ಬಳ್ಳಿ: ಐಟಿ ದಾಳಿ ನಡೆದಾಗಲೇ ಹೆದರಲಿಲ್ಲ. ಇನ್ನು ಕಣ್ಣೀರು ಹಾಕಿ ಓಟು ಕೇಳುತ್ತೇನಾ..? ಆದರ ಅಗತ್ಯ ನನಗಿಲ್ಲ. ಶಿವಳ್ಳಿ ನನ್ನ ಆಪ್ತ ಸ್ನೇಹಿತ. ಆತ ನಮ್ಮನ್ನು ಅಗಲಿರುವುದನ್ನು ನೆನೆದು ನಾನು ಭಾವುಕನಾದೆ ಎಂದು ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಶುಕ್ರವಾರ ಹುಬ್ಬಳ್ಳಿಯ ಕಾಟನ್ ಕೌಂಟಿ ಕ್ಲಬ್ ನಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ಸಭೆ ನಡೆಸಿದ ಸಚಿವರು ನಂತರ ಮಾಧ್ಯಮಗಳ ಜತೆ ಮಾತನಾಡಿದರು. ಈ ವೇಳೆ ಅವರು ಹೇಳಿದ್ದಿಷ್ಟು…

‘ಶಾಸಕರು, ಪದಾಧಿಕಾರಿಗಳು ಉತ್ಸಾಹದಿಂದ ಚುನಾವಣೆ ನಡೆಸಲು ಬಂದಿದ್ದಾರೆ. ಇದರಿಂದ ತುಂಬಾ ಸಂತೋಷವಾಗಿದೆ. ಕ್ಷೇತ್ರದಲ್ಲಿ ನಮ್ಮ ಗ್ರೌಂಡ್ ರಿಪೋರ್ಟ್ ಚೆನ್ನಾಗಿದೆ.  ಜೆಡಿಎಸ್ ಹಾಗೂ ಕಾಂಗ್ರೆಸ್ ಒಗ್ಗಟ್ಟಿನಿಂದ ಕ್ಷೇತ್ರದ ಅಭಿವೃದ್ಧಿ ಗೆ ಬದ್ದರಾಗಿದ್ದೇವೆ. ಚುನಾವಣೆಯಲ್ಲಿ ಜೆಡಿಎಸ್ ಮುಖಂಡರು ಸಕ್ರಿಯವಾಗಿ ನಮ್ಮ ಪರ ಕೆಲಸ ಮಾಡುತ್ತಿದ್ದಾರೆ.

ಶಿವಳ್ಳಿಯವರು ಕ್ಷೇತ್ರದ ಇಷ್ಟು ದಿನಗಳ ಕಾಲ ಮಾಡಿದ ಅಭಿವೃದ್ಧಿ ಕೆಲಸಗಳನ್ನು ನಾವು ಮುಂದುವರಿಸುತ್ತೇವೆ. ಈ ಚುನಾವಣೆ ಸಂದರ್ಭದಲ್ಲಿ ನಾವು ಯಾರನ್ನೂ ಟೀಕೆ ಮಾಡುವುದು ಸರಿಯಲ್ಲ. ಟೀಕೆ ಮಾಡಲು ಇದು ಸಮಯ ಕೂಡ ಅಲ್ಲ.

ನಾನು ಮತಕ್ಕಾಗಿ ಕಣ್ಣಿರು ಹಾಕಿಲ್ಲ. ಶಿವಳ್ಳಿ ನನ್ನ ಸ್ನೇಹಿತ. ಹೀಗಾಗಿ ಅವನನ್ನು ನೆನೆದು ಭಾವುಕನಾದೆ. ನನ್ನ ಮನೆ ಮೇಲೆ ಐಟಿ ರೈಡ್ ಆದಾಗಲೆ ಹೆದರಲಿಲ್ಲ. ಇನ್ನು ಕಣ್ಣಿರು ಹಾಕಿ ಒಟು ತೆಗೆದುಕೊಳ್ಳುತ್ತೀನಾ? ಆದರ ಅವಶ್ಯಕತೆ ನನಗೆ ಇಲ್ಲ.  ನಾನು ಈ ಹಿಂದೆಯೂ ಶಿವಳ್ಳಿ ಪರ ಕೆಲಸ ಮಾಡಿದ್ದೆ. ಈಗ ಅವರ ಕುಟುಂಬದವರ ಪರ ಕೆಲಸ ಮಾಡುತ್ತಿದ್ದೇನೆ.

ಈ ಚುನಾವಣೆಯಲ್ಲಿ ಎಲ್ಲಾ ಪಕ್ಷದ ಮತದಾರರು ಶಿವಳ್ಳಿ ಅವರ ಕುಟುಂಬ ಹಾಗೂ ಕಾಂಗ್ರೆಸ್ ಗೆ ಮತ ಹಾಕುತ್ತಾರೆ. ಇಡೀ ಸರ್ಕಾರ ಕುಂದಗೋಳ ಕ್ಷೇತ್ರದ ಅಭಿವೃದ್ಧಿಗೆ ಬದ್ಧವಾಗಿದೆ. ಕ್ಷೇತ್ರದ ಯಾವುದೇ ಪ್ರದೇಶದಲ್ಲೂ ಹಣದ ಆಮಿಷ ಹಾಗೂ ಅಧಿಕಾರದ ಆಮಿಷ ಒಡ್ಡುತ್ತಿಲ್ಲಾ. ಬಿಜೆಪಿಯವರ ಬಳಿ ಸಾಕ್ಷಿ ಇದ್ರೆ, ಬಹಿರಂಗ ಪಡೆಸಲಿ.

# ಬಿಎಸ್ ವೈಗೆ ತಿರುಗೇಟು:  ಕಾಂಗ್ರೆಸ್ ಹಾಗೂ ಜೆಡಿಎಸ್ ನ 20 ಶಾಸಕರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂಬ ಬಿಎಸ್ ಯಡಿಯೂರಪ್ಪನವರ ಹೇಳಿಕೆಗೆ ತಿರುಗೇಟು ನೀಡಿರುವ ಸಚಿವ ಡಿಕೆ ಶಿವಕುಮಾರ್, ‘ಯಡಿಯೂರಪ್ಪನವರ ಜತೆ ರಾಜ್ಯದ 222 ಶಾಸಕರು ಇದ್ದಾರೆ. ಅದೇ 222 ಜನ ಶಾಸಕರು ನಮ್ಮ ಸಂಪರ್ಕದಲ್ಲಿಯೂ ಇದ್ದಾರೆ. ನಮ್ಮ ಸರ್ಕಾರ ಬೀಳಿಸಿ ಮುಖ್ಯಮಂತ್ರಿ ಆಗುತ್ತೇನೆ ಎಂದು ಕನಸು ಕಾಣುತ್ತಿರುವ ಅವರು ಮೂಹೂರ್ತ ಫಿಕ್ಸ್ ಮಾಡಿಕೊಳ್ಳಲಿ’ ಎಂದರು.

Share Post

Leave a Reply

Your email address will not be published. Required fields are marked *

error: Content is protected !!