ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್, ಮುಂಗಾರು ಕೈ ಕೊಡುವ ಮುನ್ಸೂಚನೆ `ಮೋಡ ಬಿತ್ತನೆಗೆ’ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು : ಈ ಬಾರಿ ಮುಂಗಾರು ಕೈ ಕೊಡುವ ಮುನ್ಸೂಚನೆ ಇದ್ದು, ಮೋಡ ಬಿತ್ತನೆಗೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷ್ಣಬೈರೇಗೌಡ, ಈ ಬಾರಿ ಮುಂಗಾರು ಕೈ ಕೊಡುವ ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ಮೋಡ ಬಿತ್ತನೆ ಮಾಡುವುದಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಈ ಬಾರಿ ಎರಡು ವರ್ಷದ ಅವಧಿಗೆ ಮೋಡ ಬಿತ್ತನೆ ನಡೆಯಲಿದ್ದು, ಸುಮಾರು 88 ಕೋಟಿ ರೂ. ವೆಚ್ಚದಲ್ಲಿ ಮೋಡ ಬಿತ್ತನೆಗೆ ನಿರ್ಧಾರ ಮಾಡಿದ್ದೇವೆ ಎಂದರು.

Share Post

Leave a Reply

Your email address will not be published. Required fields are marked *

error: Content is protected !!