ಗರ್ಭಿಣಿಗೆ ಚಿಕಿತ್ಸೆ ನೀಡದೆ ನವಜಾತ ಶಿಶು ಸಾವು-ಕರ್ತವ್ಯಲೋಪವೆಸಗಿದ ವೈದ್ಯರ ವಿರುದ್ಧ ಶಿಸ್ತುಕ್ರಮಕ್ಕೆ ಆದೇಶ

ಕೋಲಾರ : ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭಿಣಿ ಮಹಿಳೆಗೆ ಚಿಕಿತ್ಸೆ ನೀಡದ ಕಾರಣ ಮೃತಪಟ್ಟಿದ್ದ ನವಜಾತ ಶಿಶು ಮರಣ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ವೈದ್ಯರು ಮತ್ತು ಸಂಬಂಧಪಟ್ಟವರನ್ನು ಅಮಾನತುಗೊಳಿಸಿ ಅವರ ವಿರುದ್ಧ ತಕ್ಷಣವೇ ಶಿಸ್ತುಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಆದೇಶಿಸಿದ್ದಾರೆ. ನಿರ್ಲಕ್ಷ್ಯತನ ತೋರಿ ಜೀವಹಾನಿ ಉಂಟುಮಾಡಿರುವ ಕರ್ತವ್ಯಲೋಪ ಎಸಗಿರುವ ವೈದ್ಯರ ವಿರುದ್ಧ ತಕ್ಷಣವೇ ಶಿಸ್ತುಕ್ರಮ ಕೈಗೊಳ್ಳದೆ ಕರ್ತವ್ಯಲೋಪ ಎಸಗಿರುವ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕರಿಗೂ ಸಹ ಕಾರಣ ಕೇಳಿ ನೊಟೀಸ್ ನೀಡಬೇಕು ಮತ್ತು ನೊಟೀಸ್ ಮೂಲಕ ವಿವರಣೆ ಪಡೆದು ಮಂಡಿಸಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಆದೇಶಿಸಿದ್ದಾರೆಂದು ಇಲಾಖೆಯ ಆಪ್ತ ಕಾರ್ಯದರ್ಶಿ ಎಲ್.ಸಿ.ವೀರೇಶ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ

Share Post

Leave a Reply

error: Content is protected !!