ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಸಿಎಂ ಎಚ್.ಡಿ ಕುಮಾರಸ್ವಾಮಿಗೆ ಆಹ್ವಾನ..!

ಬೆಂಗಳೂರು :  ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮಂಗಳವಾರ ಅಧಿಕೃತವಾಗಿ ಆಹ್ವಾನ ಬಂದಿದೆ. 

ಆದರೆ, ಕುಮಾರಸ್ವಾಮಿ ಅವರು ಪಾಲ್ಗೊಳ್ಳುತ್ತಾರೆಯೋ ಅಥವಾ ಇಲ್ಲವೋ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಬುಧವಾರ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಈ ತಿಂಗಳ 30 ರಂದು ಎರಡನೇ ಅವಧಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಮಾರಂಭಕ್ಕೆ ದೇಶದ ಎಲ್ಲಾ ಮುಖ್ಯಮಂತ್ರಿಗಳಿಗೂ ಆಹ್ವಾನಿಸಲಾಗಿದೆ. ಅಂತೆಯೇ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೂ ಪ್ರಧಾನಮಂತ್ರಿ ಸಚಿವಾಲಯದಿಂದ ಅಧಿಕೃತವಾಗಿ ಆಹ್ವಾನ ಬಂದಿದೆ. ಸೋಮವಾರವಷ್ಟೇ ಯಾವುದೇ ಅಧಿಕೃತ ಆಹ್ವಾನ ಬಂದಿಲ್ಲ, ಆಹ್ವಾನ ಬಂದರೆ ನೋಡೋಣ ಎಂದು ಎಚ್ಡಿಕೆ ಹೇಳಿದ್ದರು.

Share Post

Leave a Reply

error: Content is protected !!