ಕಾಂಗ್ರೆಸ್ ನಾಯಕಿ ರೇಷ್ಮಾ ಪಡೇಕನೂರ ಕೊಲೆ ಆರೋಪಿಗಳ ಬಂಧಿಸುವಲ್ಲಿ ಪೊಲೀಸರು ಯಶಸ್ವಿ..!

ವಿಜಯಪುರ,-ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ, ರಾಷ್ಟ್ರೀಯ ಮಾಧ್ಯಮಗಳಲ್ಲೂ ಸುದ್ದಿಯಾಗಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆ ರೇಷ್ಮಾ ಪಡೇಕನೂರ ಹತ್ಯೆಯ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ತೌಫಿಕ್ ಶೇಕ್ ಅಲಿಯಾಸ್ ಪೈಲ್ವಾನ್ ಬಂಧಿತ ಆರೋಪಿ. ಈತನನ್ನು ಪೊಲೀಸರು ಧೂಳಖೇಡ ಗ್ರಾಮದ ಬಳಿ ಬಂಧಿಸಿದ್ದಾರೆ. ಸೊಲ್ಲಾಪುರದ ಎಂಐಎಂ ಮುಖಂಡ ತೌಫಿಕ್ ಶೇಕ್ ಮೇ 17 ರಂದು ರೇಷ್ಮಾ ಪಡೇಕನೂರನ್ನು ವಿಜಯಪುರದ ಕೋಲ್ಹಾರ ಸೇತುವೆ ಕೆಳಗೆ ಹತ್ಯೆ ಮಾಡಿದ್ದಾನೆ ಆರೋಪ ಕೇಳಿ ಬಂದಿತ್ತು.

ಬಸವನಬಾಗೇವಾಡಿ ಸಿಪಿಐ ಮಹದೇವ ಶಿರಹಟ್ಟಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ರೇಷ್ಮಾ ಪತಿ ಖಾಜಾ ಬಂದೇ ನವಾಜ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಳ ಪತ್ತೆಗೆ ಡಿವೈಎಸ್‍ಪಿ ಮಟ್ಟದಲ್ಲಿ ಬಸವನ ಬಾಗೇವಾಡಿ ಡಿಎಸ್‍ಪಿ ಮಹೇಶ್ವರಗೌಡ ಹಾಗೂ ವಿಜಯಪುರ ಡಿಎಸ್‍ಪಿ ಅಶೋಕ್ ನೇತೃತ್ವದಲ್ಲಿ ಎರಡು ತಂಡಗಳ ರಚನೆ ಮಾಡಿದ್ದರು.

Share Post

Leave a Reply

Your email address will not be published. Required fields are marked *

error: Content is protected !!