Saturday, July 31, 2021
Homeರಾಜಕೀಯಯಾವುದೇ ಸಂದರ್ಭದಲ್ಲಾದರೂ ಚುನಾವಣೆಗೆ ಸಿದ್ಧರಾಗಿ ಎಂದು ಹೇಳಿದ್ಧ ನಿಖಿಲ್ ಹೇಳಿಕೆಗೆ ಯಡಿಯೂರಪ್ಪ ತಿರುಗೇಟು

ಇದೀಗ ಬಂದ ಸುದ್ದಿ

ಯಾವುದೇ ಸಂದರ್ಭದಲ್ಲಾದರೂ ಚುನಾವಣೆಗೆ ಸಿದ್ಧರಾಗಿ ಎಂದು ಹೇಳಿದ್ಧ ನಿಖಿಲ್ ಹೇಳಿಕೆಗೆ ಯಡಿಯೂರಪ್ಪ ತಿರುಗೇಟು

ಹುಬ್ಬಳ್ಳಿ: ಕುಮಾರಸ್ವಾಮಿಯವರ ಮಗ ಯಾವುದೇ ಸಂದರ್ಭದಲ್ಲಾದರೂ ಚುನಾವಣೆಗೆ ಸಿದ್ಧರಾಗಿ ಎಂದು ಹೇಳಿದ್ದಾರೆ.
ನಾನು ಹೇಳುತ್ತೇನೆ ಯಾವುದೇ ಕಾರಣಕ್ಕೂ ಚುನಾವಣೆ ನಡೆಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿಕಾರ ಮಾಡಲು ಆದರೆ ಅಧಿಕಾರ ಮಾಡಲಿ, ಆಗದಿದ್ದರೆ ನಮಗೆ ಬಿಟ್ಟು ಕೊಡಲಿ ನಾವು ಅಧಿಕಾರ ನಡೆಸುತ್ತೇವೆ ಎಂದು ಮೈತ್ರಿ ಸರ್ಕಾರದ ವಿರುದ್ಧ ಕಿಡಿಕಾರಿದರು.

ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿಯವರ ಮಗ ಯಾವುದೇ ಸಂದರ್ಭದಲ್ಲಾದರೂ ಚುನಾವಣೆಗೆ ಸಿದ್ಧರಾಗಿ ಎಂದು ಹೇಳಿದ್ದಾನೆ ಆದರೆ ಯಾವುದೇ ಕಾರಣಕ್ಕೂ ಹೊಸ ಚುನಾವಣೆಗೆ ಹೋಗುವ ಪ್ರಶ್ನೆಯಿಲ್ಲ. ಜನರ ಬಳಿ ಹೋಗಲು ಇನ್ನೂ ಐದು ವರ್ಷ ಬಾಕಿಯಿದೆ ನಾವು ಮರು ಚುನಾವಣೆಗೆ ಒಪ್ಪುವುದಿಲ್ಲ ಎಂದು ತಿಳಿಸಿದರು. ಜನರ ಬಳಿ ಹೋಗಲು ಇನ್ನೂ ಐದು ವರ್ಷ ಬಾಕಿಯಿದೆ. ಈ ಸರ್ಕಾರ ಬಹಳ ದಿನ ಇರುತ್ತೆ ಅಂತಾ ಯಾರಿಗೂ ವಿಶ್ವಾಸವಿಲ್ಲ, ಕೇಂದ್ರ ಸಂಪುಟದಲ್ಲಿ ಲಿಂಗಾಯತರಿಗೆ ಅವಕಾಶ ಕೊಡುವುದು ಪ್ರಧಾನಿಗಳಿಗೆ ಬಿಟ್ಟ ವಿಚಾರ ಎಂದರು.

ಕುಮಾರಸ್ಚಾಮಿ ನಿರ್ಧಾರ ಖಂಡಿಸಿ ಮೂರು ದಿನ ಧರಣಿ ಮಾಡುತ್ತೇವೆ. ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯಕ್ಕೆ ಅರ್ಥವಿಲ್ಲ. ಹಿಂದೆ ವಾಸ್ತವ್ಯ ಮಾಡಿದ ಗ್ರಾಮಗಳಿಗೆ ಸೂಕ್ತ ಅನುದಾನ ಕೊಟ್ಟಿಲ್ಲ, ಅದನ್ನು ಬಿಟ್ಟು ಬರಗಾಲ ಪರಿಸ್ಥಿತಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಿ,  ಜನರ ಗಮನ ಬೇರೆಡೆ ಸೆಳೆಯುವ ರಾಜಕೀಯ ದೊಂಬರಾಟವಿದು. ರಾಜ್ಯದ ಜನ ಇದಕ್ಕೆಲ್ಲ ಬೆಲೆ ಕೊಡಲ್ಲ. ಜನರನ್ನು ವಂಚಿಸಿ ಪರಸ್ಪರ ಕಚ್ಚಾಟ, ಬಡಿದಾಟದಲ್ಲಿ ಮೈತ್ರಿ ಸರ್ಕಾರದವರು ತೊಡಗಿದ್ದಾರೆ ಎಂದು ಯಡಿಯೂರಪ್ಪ ಇದೇ ವೇಳೆ ತಿಳಿಸಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img