ಸಂಚಾರಿ ಪೋಲೀಸ್ ಠಾಣಾ ಅವರಣದಲ್ಲಿ ವಿಶ್ವ ಪರಿಸರ ದಿನಾಚಾರಣೆ

ಕೋಲಾರ: ಪರಿಸರ ದಿನಾಚರಣೆಯ ದಿನ ಸಸಿಗಳನ್ನು ನೆಡುವುದು ನಮ್ಮ ಮೇಲೆ ಪರಿಸರ ಸಂರಕ್ಷಣೆಯು ಜವಾಬ್ದಾರಿ ತುಸು ಹೆಚ್ಚಾಗಿದೆ , ಎಂದು ಪಿ.ಯು ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಜೆ.ಜೆ ನಾಗರಾಜ್ ತಿಳಿಸಿದ್ದರು.

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕೋಲಾರ ನಗರದ ಸಂಚಾರಿ ಪೋಲೀಸ್ ಠಾಣೆ ಅವರಣದಲ್ಲಿ ಜಿಲ್ಲಾ ಜಯಕನಾಟಕ ವತಿಯಿಂದ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವ್ರು ಇಂದಿನ ಪರಿಸರವು ಮಾಲಿನ್ಯದ ಗೂಡಾಗಿದ್ದು, ನಮ್ಮ ಪರಿಸರ ಮಾತೆಯನ್ನು ನಾವು , ನಮ್ಮ ಕಾರ್ಯಗಳಿಂದ ಕಲುಷಿತಗೊಳಿಸಿ ಅದರ ದುಷ್ಪರಿಣಾಮಗಳನ್ನು ಈಗಾಗಲೇ ನಾವುಗಳು ಎದುರಿಸುತ್ತಿದ್ದೇವೆ.

ಈಗಿನ ಯುವ ಜನತೆ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಮಹಾತ್ ಕಾರ್ಯಗಳನ್ನು ಹಮ್ಮಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು.

ಇನ್ನು ಪರಿಸರ ದಿನಾಚರಣೆ ಕೇವಲ‌ ವರ್ಷಕ್ಕೆ ಒಂದು ದಿನ ಮಾತ್ರ ಸೀಮಿತವಾಗಬಾರದು ವರ್ಷದ ಪ್ರತಿ ದಿನವೂ ನಮಗೆ ಪರಿಸರ ದಿನವಾಗಬೇಕು ಇದನ್ನೇ ನಮ್ಮ ಜೀವನದ ಗುರಿಯನ್ನಾಗಿಸಿಕೊಂಡು ಪರಿಸರ ಸಂರಕ್ಷಣೆಯತ್ತ ಪಣತೊಡೋಣ, ಎಂದು ಯುವ ಪೀಳಿಗೆಗೆ ಕಿವಿ ಮಾತನ್ನು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಸಂಚಾರಿ ಪೊಲೀಸ್ ಠಾಣೆಯ ಸಬ್ಇನ್ಸ್ ಪೆಕ್ಟರ್ ಜಯ ಕರ್ನಾಟಕ ಜಿಲ್ಲಾಧ್ಯಕ್ಷ ಕೆ.ಆರ್. ತ್ಯಾಗರಾಜ್, ಜಯ ಕರ್ನಾಟಕದ ಕಾರ್ಯಕರ್ತರು ಪದಾದಿಕಾರಿಗಳು ಹಾಗೂ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿವರ್ಗದವರು ಹಾಜರಿದ್ದರು.

Share Post

Leave a Reply

Your email address will not be published. Required fields are marked *

error: Content is protected !!