ಕಿಡಿಗೇಡಿಗಳಿಂದ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ. ಕಿಡಿಗೇಡಿಗಳ ಈ ಕೃತ್ಯಕ್ಕೆ ಗ್ರಾಮಸ್ಥರು ಆಕ್ರೋಶ

ವಿಜಯಪುರ: ನಂದಿ ವಿಗ್ರಹಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಡೆದಿದೆ. ಇಂದು ಬೆಳಗಿನ ಜಾವ ಪೂಜಾ ವಿಧಿ-ವಿಧಾನ ನಡೆಸುವ ವೇಳೆ ಈ ಕೃತ್ಯ ಬೆಳಕಿಗೆ ಬಂದಿದೆ. ಪೂಜೆ ಬಳಿಕ ದೇವಸ್ಥಾನದಲ್ಲಿ ಯಾರೂ ಇಲ್ಲದನ್ನು ಗಮನಿಸಿದ ಕಿಡಿಗೇಡಿಗಳಿಂದ ನಂದಿ ವಿಗ್ರಹಕ್ಕೆ ಚಪ್ಪಲಿ ಹಾಕಿದ್ದಾರೆ.


ಕಿಡಿಗೇಡಿಗಳ ಈ ಕೃತ್ಯಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಸ್ಥಳಕ್ಕೆ ಶ್ವಾನ ದಳ ಕರೆಸಿ ಆರೋಪಿಗಳನ್ನು ಬಂಧಿಸಿ ಶಿಕ್ಷಿಸುವಂತೆ ಆಗ್ರಹಿಸಿದ್ದಾರೆ.  ಕೂಡಗಿ ಎನ್ ಟಿಪಿಸಿ ಪೊಲೀಸ್ ಠಾಣೆ ಪಿಎಸ್‍ಐ ಬಸವರಾಜ್ ಅವಟಿ ದೇವಸ್ಥಾನಕ್ಕೆ ಭೇಟಿ, ಪರಿಶೀಲನೆ ನಡೆಸಿದರು.

Share Post

Leave a Reply

error: Content is protected !!