ಸರ್ಕಾರ ಪತನಗೊಳಿಸುವ ಯಾವ ಪ್ರಯತ್ನವನ್ನೂ ಬಿಜೆಪಿ ಮಾಡುವುದಿಲ್ಲ: ಶ್ರೀರಾಮುಲು

ದಾವಣಗೆರೆ:ಬಿಜೆಪಿ ಹೈಕಮಾಂಡ್ ಸೂಚನೆಯಂತೆ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಬಹುದಾದ ಆಪರೇಷನ್ ಕಮಲದಿಂದ ನಾವು ದೂರ ಇರುತ್ತೇವೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ.

ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಪರೇಷನ್ ಕಮಲಕ್ಕೆ ಕೈ ಹಾಕದಂತೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ. ನಾವು ಅದನ್ನು ಪಾಲಿಸುತ್ತೇವೆ. ಸರ್ಕಾರ ಪತನಗೊಳಿಸುವ ಯಾವ ಪ್ರಯತ್ನವನ್ನೂ ಬಿಜೆಪಿ ಮಾಡುತ್ತಿಲ್ಲ, ಮಾಡುವುದೂ ಇಲ್ಲ ಎಂದು ಹೇಳಿದರು.


ಸಮ್ಮಿಶ್ರ ಸರ್ಕಾರ ಒಡೆದ ಮನೆಯಂತಾಗಿದೆ. ಒಡೆದ ಮನೆ ವಾಸಕ್ಕೆ ಯೋಗ್ಯವಲ್ಲ. ಸಂಸಾರಕ್ಕೆ ಯೋಗ್ಯವಲ್ಲದ ಮನೆಯಲ್ಲಿ ಯಾರೂ  ಇರುವುದಿಲ್ಲ. ಅದೇ ರೀತಿ ಈ ಸರ್ಕಾರ ಪತನಗೊಂಡರೆ ಸಾಕು ಎಂದು ದೋಸ್ತಿ ಪಕ್ಷಗಳ ಶಾಸಕರು, ಸಚಿವರೇ ಕುಣಿಯುತ್ತಿದ್ದಾರೆ. ಆಡಳಿತದ ಕುಸಿತದಿಂದಾಗಿ ಅರಾಜಕತೆ ನಿರ್ಮಾಣವಾಗಿದೆ. ಈ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಹೇಳಿದರು.


ರಾಜ್ಯದ ಬರ ಪರಿಸ್ಥಿತಿ ಇದೆ. ಸಮ್ಮಿಶ್ರ ಸರ್ಕಾರ ಆ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಜವಾಬ್ದಾರಿಯುತ ವಿರೋಧ ಪಕ್ಷವಾದ ಬಿಜೆಪಿ ರಾಜ್ಯಾದ್ಯಂತ ಬರ ಅಧ್ಯಯನ ಪ್ರವಾಸ ಮಾಡುತ್ತಿದೆ ಎಂದರು.

Share Post

Leave a Reply

Your email address will not be published. Required fields are marked *

error: Content is protected !!