ಯಾರಿಗೆ ಸಚಿವ ಸ್ಥಾನ ಕೊಡಬೇಕು..? ದೇವೇಗೌಡರ ಸಲಹೆ ಏನು ಗೊತ್ತಾ..?

ಬೆಂಗಳೂರು: ದೋಸ್ತಿ ಸರ್ಕಾರ ಸಚಿವ ಸಂಪುಟ ವಿಸ್ತರಣೆ ಕಸರತ್ತು ಜೋರಾಗೇ ನಡೀತಿದೆ. ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟ, ಮತ್ತೊಂದ್ಕಡೆ ಜೆಡಿಎಸ್‌ನಲ್ಲೂ ಅತೃಪ್ತರನ್ನು ಸಮಾಧಾನ ಪಡಿಸಬೇಕಿದೆ

ಇದೇ ಬುಧವಾರ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಸಿಎಂ ಕುಮಾರಸ್ವಾಮಿ, ದೇವೇಗೌಡರ ಜೊತೆ 1 ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಗೌಡರ ನಿವಾಸಕ್ಕೆ ಭೇಟಿ ನೀಡಿ, ಹಲವು ಮಹತ್ವದ ವಿಷಯಗಳ ಬಗ್ಗೆ ಮಾತುಕತೆ ನಡೆಸಿದರು.

ಸಭೆಯಲ್ಲಿ ಜೆಡಿಎಸ್‌ ಕೋಟಾದಲ್ಲಿ ಯಾರಿಗೆ ಸಚಿವ ಸ್ಥಾನ ಕೊಡಬೇಕು ಎಂಬ ಬಗ್ಗೆ ದೇವೇಗೌಡರು ಸಲಹೆ ನೀಡಿದ್ದಾರೆ. ಸದ್ಯ ಜೆಡಿಎಸ್​ನಲ್ಲಿ ಎರಡು ಖಾತೆಗಳು ಖಾಲಿ ಇವೆ. ಒಂದು ಸ್ಥಾನವನ್ನು ಈಗಾಗಲೇ ಪಕ್ಷೇತರ ಶಾಸಕರಿಗೆ ಕೊಡಲು ತೀರ್ಮಾನ ಮಾಡಲಾಗಿದೆ. ಇನ್ನುಳಿದ ಒಂದು ಸ್ಥಾನ ಯಾರಿಗೆ ಹಂಚಬೇಕು ಎನ್ನುವದರ ಬಗ್ಗೆ ಚರ್ಚೆ ನಡೆಸಲಾಗಿದೆ.

ಜೆಡಿಎಸ್​ನಲ್ಲಿ ಹೆಚ್ಚು ಜನ ಆಕಾಂಕ್ಷಿಗಳು ಇರುವುದು ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದೆ. ಪರಿಷತ್ ಸದಸ್ಯ ಬಿ.ಎಂ. ಫಾರೂಕ್, ಸಭಾಪತಿ ಸ್ಥಾನದಿಂದ ಕೆಳಗಿಳಿದ ಬಸವರಾಜ ಹೊರಟ್ಟಿ, ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನ ತ್ಯಜಿಸಿದ ಹೆಚ್.ವಿಶ್ವನಾಥ್ ಸೇರಿದಂತೆ ಹಲವು ಆಕಾಂಕ್ಷಿಗಳಿದ್ದಾರೆ. ಇವರಲ್ಲಿ ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದು ಜೆಡಿಎಸ್​ ನಾಯಕರಿಗೆ ದೊಡ್ಡ ಪ್ರಶ್ನೆಯಾಗಿ ಕಾಡುತ್ತಿದೆ.

ಸದ್ಯ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳುವಂತೆ ದೇವೇಗೌಡರು, ಪುತ್ರ ಸಿಎಂ ಕುಮಾರಸ್ವಾಮಿಗೆ ಸಲಹೆ ನೀದ್ದಾರೆ.. ಸದ್ಯಕ್ಕೆ ಜೆಡಿಎಸ್‌ ಯಾರಿಗೆ ಮಂತ್ರಿ ಕುರ್ಚಿ ಕೊಟ್ಟು ಯಾರ ಬಾಯಿಗೆ ಬೀಗ ಹಾಕುತ್ತೆ ಎಂಬುದನ್ನ ಕಾದು ನೋಡಬೇಕಿದೆ.

Share Post

Leave a Reply

Your email address will not be published. Required fields are marked *

error: Content is protected !!