ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತರಲು ಆಗ್ರಹ

ಧಾರವಾಡ : ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಆ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತರುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದಲ್ಲಿ ನಡೆಸುತ್ತಿರುವ ದುರಾಡಳಿತವನ್ನು ನೋಡಿದರೆ, 1984 ರ ತುರ್ತು ಪರಿಸ್ಥಿತಿ ನೆನಪಾಗುತ್ತಿದೆ. ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಹಾಗೂ ಚುನಾವಣೆ ನಂತರವೂ ಆ ರಾಜ್ಯದಲ್ಲಿ ಹಿಂಸಾಚಾರಗಳು ನಿಲ್ಲುತ್ತಿಲ್ಲ. ಬಿಜೆಪಿ ನಾಯಕರ ಹಾಗೂ ಕಾರ್ಯಕರ್ತರ ಮೇಲೆ ಆ ರಾಜ್ಯದಲ್ಲಿ ದೌರ್ಜನ್ಯಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಬಿಜೆಪಿ ನಾಯಕನ ಪತ್ನಿ ಮೇಲೆ ಅತ್ಯಾಚಾರ ನಡೆದಿದ್ದು ಇದಕ್ಕೆ ಸಾಕ್ಷಿ. ಪಶ್ಚಿಮ ಬಂಗಾಳದಲ್ಲಿ ಹಿಂದೂಗಳು ಮನೆಯಲ್ಲಿ ಪೂಜೆ ಮಾಡಿದರೆ, ಅಂತವರನ್ನು ಅರೆಬೆತ್ತಲೆಗೊಳಿಸಿ ಅವರ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ. ಕಳೆದ 2 ದಿನಗಳಲ್ಲಿ ಆ ರಾಜ್ಯದಲ್ಲಿ 5 ಬಿಜೆಪಿ ಕಾರ್ಯಕರ್ತರ ಹತ್ಯೆಯಾಗಿದೆ. ಆ ಕಾರ್ಯಕರ್ತರ ಶವವನ್ನು ಬಿಜೆಪಿ ಕಚೇರಿಗೆ ಕೊಂಡೊಯ್ಯುವಾಗ ಪೊಲೀಸರು ಅದನ್ನು ತಡೆಹಿಡಿದು ಪ್ರಜಾಪ್ರಭುತ್ವ ಹಾಗೂ ಮನುಷ್ಯತ್ವವನ್ನು ಕಗ್ಗೊಲೆ ಮಾಡಿದ್ದಾರೆ. ಜೈಶ್ರೀರಾಮ ಎಂದು ಘೋಷಣೆ ಕೂಗಿದವರ ಮೇಲೆ ಪ್ರಕರಣ ದಾಖಲಿಸಲು ಮಮತಾ ಬ್ಯಾನರ್ಜಿ ಆದೇಶಿಸಿರುವುದು ಅವರ ದುರಹಂಕಾರವನ್ನು ಎತ್ತಿತೋರಿಸುತ್ತದೆ. ಆದ್ದರಿಂದ ಆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು,ಆ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತರಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದರು. ಮೋಹನ ರಾಮದುರ್ಗ,ಶಿವು ಹಿರೇಮಠ,ಸಂಜಯ ಕಪಟಕರ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು

Share Post

Leave a Reply

Your email address will not be published. Required fields are marked *

error: Content is protected !!