ರೈತರ ಎಲ್ಲಾ ಬೆಳೆ ಸಾಲಗಳು ಏಕ ಕಾಲದಲ್ಲಿ ಮನ್ನಾ

ಬೆಂಗಳೂರು : ವಾಣಿಜ್ಯ ಬ್ಯಾಂಕುಗಳ ಬೆಳೆ ಸಾಲಮನ್ನಾಗೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಅರ್ಹತೆ ಹೊಂದಿರುವ ಫಲಾನುಭವಿಗಳಿಗೆ ಬಾಕಿ ಉಳಿದಿರುವ ಸಾಲವನ್ನು ಒಂದೇ ಕಂತಿನಲ್ಲಿ ಬಿಡುಗಡೆ ಮಾಡಲು ಸರ್ಕಾರ ಆದೇಶ ಹೊರಡಿಸಲಾಗಿದೆ.

ಕಳೆದ ಒಂದು ವರ್ಷಗಳಿಂದ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆ ಹಾಗೂ ಕುತೂಹಲಕ್ಕೆ ಕಾರಣವಾಗಿದ್ದ ರೈತರ ಬೆಳೆ ಸಾಲಮನ್ನಾ ಕುರಿತು ಕೊನೆಗೂ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಮಂಗಳವಾರ ನಡೆದ ಸಭೆಯಲ್ಲಿ ವಾಣಿಜ್ಯ ಬ್ಯಾಂಕುಗಳಲ್ಲಿನ ರೈತರ ಎಲ್ಲಾ ಬೆಳೆ ಸಾಲಗಳನ್ನೂ ಏಕ ಕಾಲದಲ್ಲಿ ಮನ್ನಾ ಮಾಡುವಂತೆ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಆದೇಶಿಸಿದ್ದಾರೆ.

Share Post

Leave a Reply

error: Content is protected !!