2 ಬೈಕ್ ಗಳು ಡಿಕ್ಕಿ-ಓರ್ವ ಬೈಕ್ ಸವಾರ ಸಾವು

ಕೋಲಾರ : ಕೋಲಾರ ಜಿಲ್ಲೆಯ ವೇಮಗಲ್ ಮತ್ತು ನರಸಾಪುರ ರಸ್ತೆಯ ಕುರುಬರಹಳ್ಳಿ ಗೇಟ್ ಬಳಿ ಎರಡು ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸಾವನ್ನಪ್ಪಿದ್ದಾನೆ.

ಈ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮೃತ ಬೈಕ್ ಸವಾರನನ್ನು ಸೀತಿ ಹೊಸೂರು ಗ್ರಾಮದ 19 ವರ್ಷದ ಸುನಿಲ್ ಕುಮಾರ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ವೇಮಗಲ್ ಠಾಣೆಯಲ್ಲಿ ಪ್ರಕರಣ ದಾಖಲುಮಾಡಿಕೊಳ್ಳಲಾಗಿದೆ.

Share Post

Leave a Reply

Your email address will not be published. Required fields are marked *

error: Content is protected !!