Sunday, June 13, 2021
Homeಜಿಲ್ಲೆಯಾದಗಿರಿ : ಗುರುಮಿಠಕಲ್ ತಾಲ್ಲೂಕಿನ ಚಂಡ್ರಕಿಯಲ್ಲಿ ಸಿಎಂ ಗ್ರಾಮವಾಸ್ತವ್ಯ

ಇದೀಗ ಬಂದ ಸುದ್ದಿ

ಯಾದಗಿರಿ : ಗುರುಮಿಠಕಲ್ ತಾಲ್ಲೂಕಿನ ಚಂಡ್ರಕಿಯಲ್ಲಿ ಸಿಎಂ ಗ್ರಾಮವಾಸ್ತವ್ಯ

ಯಾದಗಿರಿ : ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂಡ್ರಕಿ ಗ್ರಾಮದಲ್ಲಿ ಹಮ್ಮಿಕೊಂಡಿರುವ ಜನತಾದರ್ಶನ ಹಾಗೂ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಯಾದಗಿರಿಯಿಂದ ಎನ್.ಇ.ಕೆ.ಆರ್.ಟಿ.ಸಿ. ಬಸ್ ಮೂಲಕ ಪ್ರಯಾಣ ಬೆಳೆಸಿದರು.

ಚಂಡರಕಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜನತಾ ದರ್ಶನಕ್ಕೆ ಅರ್ಜಿ ಸಲ್ಲಿಸಲು ಅವಕಾಶ  ಕಲ್ಪಿಸಲಾಗಿದೆ. ಜನತಾ ದರ್ಶನದ ನಂತರ ಮುಖ್ಯಮಂತ್ರಿಗಳು ಚಂಡರಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಮುಖ್ಯಮಂತ್ರಿಗಳು ದಾರಿಯುದ್ದಕ್ಕೂ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಸಚಿವರಾದ ಶ್ರೀ ವೆಂಕಟರಾವ ನಾಡಗೌಡ, ಶಾಸಕರುಗಳಾದ ನಾಗನಗೌಡ ಕಂದಕೂರ, ಶರಣಬಸಪ್ಪ ದರ್ಶನಾಪೂರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೋನರೆಡ್ಡಿ, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ. ಜಿಲ್ಲಾಧಿಕಾರಿ ಕೂರ್ಮರಾವ, ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳು ಉಪಸ್ಥಿತರಿದ್ದರು. ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆಗಮನಕ್ಕಾಗಿ ಗ್ರಾಮ ವಾಸ್ತವ್ಯ ಕೇಂದ್ರವಾದ ಗುರುಮಿಠಕಲ್ ಕ್ಷೇತ್ರದ ಚಂಡ್ರಿಕಿ ಗ್ರಾಮವು ಶೃಂಗಾರಗೊಂಡಿದೆ. ಮಹಿಳೆಯರು, ವಿಕಲಚೇತನರಿಗೆ ಪ್ರತ್ಯೇಕ ಕೌಂಟರುಗಳಿವೆ. ವಿವಿಧ ಇಲಾಖೆಗಳ ಯೋಜನೆಗಳನ್ನು ಬಿಂಬಿಸುವ ಪ್ರದರ್ಶನ ಮಳಿಗೆಗಳು,ರಾಜ್ಯಸರ್ಕಾರದ ಒಂದು ವರ್ಷದ ಸಾಧನೆಗಳ ಫಲಕಗಳು,ದೃಶ್ಯ ಮಾಹಿತಿಗಳೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸ್ಥಾಪಿಸಿರುವ ಮಳಿಗೆ ಕಾರ್ಯಕ್ರಮದ ಜನಾಕರ್ಷಣೆಯ ಕೇಂದ್ರವಾಗಿದೆ

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img