ಶಾಸಕ ಶ್ರೀಮಂತ ಪಾಟೀಲ್ ಅಪಹರಣ ಸಂಬಂಧ ಕಾಂಗ್ರೇಸ್‌ನಿಂದ ದೂರು : ಎಫ್ಐಆರ್ ದಾಖಲು

ಬೆಂಗಳೂರು : ಕಾಗವಡ ಶಾಸಕ ಶ್ರೀಮಂತ ಪಾಟೀಲರನ್ನು ಅಪಹರಣ ಮಾಡಲಾಗಿದೆ ಎಂದು ಕಾಂಗ್ರೆಸ್ ದೂರು ದಾಖಲಿಸಿದೆ.

ಇಂದು‌ ಸದನದಲ್ಲಿಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಸ್ಪೀಕರ್ ರಮೇಶ್ ಕುಮಾರ್ ಅವರ ಮುಂದೆ ಶಾಸಕ ಶ್ರೀಮಂತ ಪಾಟೀಲ್ ಅಪಹರಣದ ಕುರಿತು ವಿಚಾರ ಪ್ರಸ್ತಾಪಿಸಿದ್ದು ಈ ಬಗ್ಗೆ ಸ್ಪೀಕರ್ ವರದಿ ಸಲ್ಲಿಸುವಂತೆ ಗೃಹ ಇಲಾಖೆಗೆ ಸೂಚಿಸಿದ್ದಾರೆ. ಶಾಸಕ‌ ಲಕ್ಷ್ಮಣ್ ಸವದಿ ಮುಖಾಂತರ ಅಪಹರಿಸಲಾಗಿದೆ ಎಂದು ಡಿಕೆಶಿ ಆರೋಪಿಸಿದ್ದು ಈ ವೇಳೆ ಭಾರೀ ಗದ್ದಲ ಉಂಟಾಗಿತ್ತು.

ಶಾಸಕ ಪಾಟೀಲ್ ಅಪಹರಣವಾಗಿದ್ದು‌ ಅವರನ್ನು ಹುಡುಕಿ ಕೊಡುವಂತೆ ಕಾಂಗ್ರೆಸ್ ಪಕ್ಷ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಎಫ್ಐಆರ್ ದಾಖಲಾಗಿದೆ. ವಿಚಾರ ಸಂಬಂಧ ಪೊಲೀಸ್ ಆಯುಕ್ತ ಅಲೋಕ್‌ಕುಮಾರ್ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದು ಮುಂಬೈ ಪೊಲೀಸರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಸಕ ಶ್ರೀಮಂತ್ ಪಾಟೀಲ್‌ಗೆ ಭದ್ರತೆ ಒದಗಿಸಿದ್ದಾರೆ ಎನ್ನಲಾಗಿದೆ.

Share Post

Leave a Reply

Your email address will not be published. Required fields are marked *

error: Content is protected !!