ನೇತ್ರಾವತಿ ನದಿ ಸೇತುವೆ ಬಳಿ ಎಸ್.ಎಂ.ಕೃಷ್ಣ ಅಳಿಯ ಸಿದ್ದಾರ್ಥ್‌ ನಾಪತ್ತೆ !

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ನಲ್ಲಿ ಮಂಗಳೂರು ನಗರದಿಂದ ಉಳ್ಳಾಲ ಕಡೆಗೆ ಹೋಗುವ ಮಾರ್ಗದಲ್ಲಿರುವ ನೇತ್ರಾವತಿ ಸೇತುವೆ ಬಳಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಳಿಯ ಸಿದ್ದಾರ್ಥ್‌ ಅವರು ಸೋಮವಾರ ರಾತ್ರಿ ನಾಪತ್ತೆಯಾಗಿದ್ದಾರೆ. ಪೊಲೀಸರಿಂದ ತೀವ್ರ ಶೋಧ ನಡೆಸಲಾಗುತ್ತಿದೆ.

ಬೆಂಗಳೂರು ನೋಂದಣಿ ಸಂಖ್ಯೆಯ ಕಾರಿನಲ್ಲಿ ಬಂದಿದ್ದ ಸಿದ್ದಾರ್ಥ್‌ ನೇತ್ರಾವತಿ ಸೇತುವೆ ಮೇಲೆ ತೆರಳುತ್ತಿದ್ದಾಗ ಕಡೆಕಾರು ರಸ್ತೆಯಲ್ಲಿ ಹೋಗುವಂತೆ ಚಾಲಕನಿಗೆ ಸೂಚಿಸಿದ್ದಾರೆ. ಸ್ವಲ್ಪ ದೂರ ಹೋಗುತ್ತಿದ್ದಂತೆ ಕಾರು ನಿಲ್ಲಿಸಲು ಹೇಳಿ, ಮೊಬೈಲ್ ನಲ್ಲಿ ಮಾತನಾಡುತ್ತಾ ಕಾರಿನಿಂದ ಇಳಿದು ಮುಂದಕ್ಕೆ ಹೋಗಿದ್ದಾರೆ. ಆ ಬಳಿಕ ನಾಪತ್ತೆ ಆಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕಾರಿನಿಂದ ಇಳಿದ ಸಿದ್ದಾರ್ಥ್‌ ನಾಪತ್ತೆಯಾಗಿದ್ದು, ನೇತ್ರಾವತಿ ನದಿಗೆ ಹಾರಿರಬಹುದು ಎಂದು ಚಾಲಕ ಪೊಲೀಸರಿಗೆ ತಿಳಿಸಿದ್ದಾನೆ. ಸಿದ್ದಾರ್ಥ್‌ ಅವರು ಎಸ್‌.ಎಂ ಕೃಷ್ಣ ಅವರ ಪುತ್ರಿಯ ಪತಿ. ‘ಕಾಫಿ ಡೇ’ ಮಾಲೀಕರಾದ ಸಿದ್ದಾರ್ಥ್‌ ಉದ್ಯಮಿಯೂ ಹೌದು.

ಮಂಗಳೂರು ನಗರ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ನೂರಾರು ಸಂಖ್ಯೆಯಲ್ಲಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಮಂಗಳವಾರ ಬೆಳಗ್ಗೆ ದೋಣಿಗಳ ಮೂಲಕ ಹುಡುಕಾಟ ನಡೆಸಲು ಪೊಲೀಸರು ನಿರ್ಧರಿಸಿದ್ದಾರೆ ಎನ್ನಲಾಗಿದೆ….

Share Post

Leave a Reply

Your email address will not be published. Required fields are marked *

error: Content is protected !!