ಶ್ರೀನಿವಾಸಪುರ : ಆಕರ್ಷಕ ಪಥ ಸಂಚಲನದೊಂದಿಗೆ ಸ್ವಾತಂತ್ರ್ಯ ದಿನಾಚರಣೆ

ಶ್ರೀನಿವಾಸಪುರ : ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ ಅಧ್ಯಕ್ಷ , ತಹಶೀಲ್ದಾರ್ ಬಿ.ಎಸ್.ರಾಜೀವ್ ಅವರ ಅಧ್ಯಕ್ಷತೆಯಲ್ಲಿ 73 ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.

ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ ವತಿಯಿಂದ ಸ.ಬಾ.ಪ.ಪೂ.ಕಾಲೇಜಿನ ಮೈದಾನದಲ್ಲಿ 73 ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ನಡೆಯಿತು.

ಪಿಎಸ್ಐ ವೆಂಕಟೇಶ್ ಮತ್ತು ಅವರ ಸಿಬ್ಬಂದಿಯಿಂದ ಮತ್ತು ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನೆರವೇರಿತು. ಕಾರ್ಯಕ್ರಮ ಆರಂಭವಾಗಿ ಧ್ವಜಾರೋಹಣ ರಾಷ್ಟ್ರ ಗೀತೆ, ಧ್ವಜ ಗೀತೆ ಹಾಡಿದರು. ನಂತರ ಶಾಲೆಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಈ ಸಂದರ್ಭದಲ್ಲಿ ತಾಲ್ಲೂಕಿನ ಸೈನಿಕರ ಪೋಷಕರಿಗೆ ಮತ್ತು ಹತ್ತನೇ ತರಗತಿ ಪರೀಕ್ಷೆಯಲ್ಲಿ ತಾಲ್ಲೂಕು ಮಟ್ಟದಲ್ಲಿ ಅತ್ಯುನತ ಅಂಕಗಳನ್ನು ಪಡೆದ 3 ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ನೀಡಿ ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಎಂ.ರಾಜಣ್ಣ, ಬಿಇಒ ರೇಣುಕಮ್ಮ, ಸರ್ಕಾರಿ ನೌಕರರ ಅಧ್ಯಕ್ಷರಾದ ಎಂ ನಾಗರಾಜ್, ಪುರಸಭೆ ಮುಖ್ಯಾಧಿಕಾರಿ ಮೋಹನ್ ಕುಮಾರ್, ಶ್ರೀನಿವಾಸಪುರ ಸಿಪಿಐ.ರಾಘವೇಂದ್ರ ಪ್ರಸಾದ್, ಸದಸ್ಯರಾದ ಎಂ.ಬೈರೇಗೌಡ, ಎಪಿಎಂಸಿ.ಅಧ್ಯಕ್ಷ ರಾಜೇಂದ್ರ ಪ್ರಸಾದ್, ತಾ.ಪಂ. ಮಾಜಿ ಸದಸ್ಯ ಕೆ.ಕೆ.ಮಂಜುನಾಥ್ ಮತ್ತಿತರ ಅಧಿಕಾರಿಗಳು ಹಾಗೂ ಪಟ್ಟಣದ ವಿವಿಧ ಶಾಲೆಗಳ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Share Post

Leave a Reply

Your email address will not be published. Required fields are marked *

error: Content is protected !!