ಸಂಪುಟದಲ್ಲಿ ಅನ್ಯಾಯ ಆರೋಪ : ಮತ್ತೆ ಎದ್ದ ಪ್ರತ್ಯೇಕ ರಾಜ್ಯದ ಕೂಗು

ಕಲಬುರಗಿ : ಸಚಿವ ಸಂಪುಟದಲ್ಲಿ ಹೈದರಾಬಾದ್ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಹೈದರಾಬಾದ್-ಕರ್ನಾಟಕ ಭಾಗದ ಒಬ್ಬರಿಗೆ ಮಾತ್ರ ಸಚಿವ ಸ್ಥಾನ ನೀಡಿರುವುದಕ್ಕೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರವು ಈ ಭಾಗಕ್ಕೆ ಮಲತಾಯಿ ಧೋರಣೆ ತೊರುತ್ತಿದೆ ಎಂದು ಆರೋಪಿಸಿ,
ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಮಾಡುವಂತೆ ಆಗ್ರಹಿಸಿ ಯಡಿಯೂರಪ್ಪ ವಿರುದ್ಧ ಘೋಷಣೆ ಕೂಗಿದರು.

ನಿಮ್ಮ ಬೆಂಬಲಕ್ಕೆ ನಮ್ಮ ಶಾಸಕರು ಬೇಕು.
ಸಚಿವ ಸ್ಥಾನಕ್ಕ ನಮ್ಮವರು ಲೆಕ್ಕಕ್ಕಿಲ್ಲ.
ಅದಕ್ಕಾಗಿ ನಮಗೆ ಕಲ್ಯಾಣ‌ ಕರ್ನಾಟಕ ಪ್ರತ್ಯೇಕ ರಾಜ್ಯ ಕೊಡಿ ಎಂದು ಆಗ್ರಹಿಸಿದರು.

ದಕ್ಷಿಣ ಕರ್ನಾಟಕ, ಮತ್ತು ಮುಂಬೈ ಕರ್ನಾಟಕದವರ ದಬ್ಬಾಳಿಕೆ ಸಾಕು‌. ನಮಗೆ ಕಲ್ಯಾಣ‌ ಕರ್ನಾಟಕ ಪ್ರತ್ಯೇಕ ರಾಜ್ಯ ಕೊಡಿ.
ಕೇಂದ್ರ ಹಾಗೂ ರಾಜ್ಯದಿಂದ ಹೈದ್ರಾಬಾದ್ ಕರ್ನಾಟಕ ಭಾಗಕ್ಕೆ ನೀಡಿದ ಕೊಡುಗೆ ಚೊಂಬು ಎಂಬುವ ಬರಹಗಳ ಫಲಕಗಳನ್ನು ಹಿಡಿದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಸಚಿವ ಸ್ಥಾನ ನೀಡದಿರುವುದಕ್ಕೆ ಈ ಭಾಗದ ಎಲ್ಲ ಬಿಜೆಪಿ ಶಾಸಕರು, ಸಂಸದರು ರಾಜೀನಾಮೆ ನೀಡಬೇಕು. ಪ್ರಥಮ ಸಂಪುಟ ಸಭೆಯಲ್ಲಿ ಪ್ರತ್ಯೇಕ ರಾಜ್ಯ ಸ್ಥಾಪನೆ ನಿರ್ಣಯ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಬಸವಕಲ್ಯಾಣದಿಂದ ಚಳುವಳಿ ಆರಂಭಿಸುತ್ತೇವೆ ಎಂದು ಹೋರಾಟಗಾರರು
ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

Share Post

Leave a Reply

Your email address will not be published. Required fields are marked *

error: Content is protected !!