‘ಒಕ್ಕಲಿಗ ಒಕ್ಕೂಟ ಪ್ರತಿಭಟನಾ ಮೆರವಣಿಗೆ ಯಶಸ್ವಿ’ :ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ನಿಯೋಗ

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿರುವುದನ್ನು ಖಂಡಿಸಿ ಇಂದು ವಿಶ್ವ ಒಕ್ಕಲಿಗ ಒಕ್ಕೂಟ ನಡೆಸಿದ ಬೃಹತ್ ಪ್ರತಿಭಟನಾ ಮೆರವಣಿಗೆ ಯಶಸ್ವಿಯಾಗಿದೆ. ಡಿಕೆಶಿ ವಿಚಾರದಲ್ಲಿ ಅನುಸರಿಸಿರುವ ಕ್ರಮ ಸರಿಯಲ್ಲ ಎಂದು ಪ್ರತಿಭಟನಾ ನಿರತ ಒಕ್ಕೂಟದ ನಿಯೋಗ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.

ಬೆಂಗಳೂರು : ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿರುವುದನ್ನು ಖಂಡಿಸಿ ಇಂದು ವಿಶ್ವ ಒಕ್ಕಲಿಗ ಒಕ್ಕೂಟ ನಡೆಸಿದ ಬೃಹತ್ ಪ್ರತಿಭಟನಾ ಮೆರವಣಿಗೆ ಯಶಸ್ವಿಯಾಗಿದೆ. ಡಿಕೆಶಿ ವಿಚಾರದಲ್ಲಿ ಅನುಸರಿಸಿರುವ ಕ್ರಮ ಸರಿಯಲ್ಲ ಎಂದು ಪ್ರತಿಭಟನಾ ನಿರತ ಒಕ್ಕೂಟದ ನಿಯೋಗ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.

ಇಂದು ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಒಕ್ಕಲಿಗ ಸಮುದಾಯದ ಲಕ್ಷಾಂತರ ಮಂದಿ ಪಾಲ್ಗೊಂಡರು. ಕಾಂಗ್ರೆಸ್ ನ ಹಿರಿಯ ನಾಯಕರು, ಅಪಾರ ಬೆಂಬಲಿಗರು ಪಾಲ್ಗೊಂಡು ತಮ್ಮ ಡಿ.ಕೆ.ಶಿವಕುಮಾರ್ ಅವರಿಗೆ ಬೆಂಬಲ ಸೂಚಿಸಿದರು. ಇನ್ನು ಕನಕಪುರ ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಡಿಕೆಶಿ ಅಭಿಮಾನಿಗಳು ಪಾಲ್ಗೊಂಡಿದ್ದು, ಡಿಕೆಶಿ ಬಂಧನದ ಕ್ರಮ ಸರಿಯಲ್ಲ ಎಂದು ಆಗ್ರಹಿಸಿ ಘೋಷಣೆ ಕೂಗಿದರು. ಭದ್ರತೆಗಾಗಿ ಸುಮಾರು 25 ಸಾವಿರ ಪೊಲೀಸರನ್ನು ನಿಯೋಜಿಸಿದ್ದು, ಪ್ರತಿಭಟನಾ ರಾಲಿ ಪಾಲ್ಗೊಂಡ ಮಾರ್ಗದ ಹಲವೆಡೆ ಟ್ರಾಫಿಕ್ ಜಾಮ್ ಕಿರಿಕಿರಿ ಉಂಟಾಯಿತು. ಈ ಮಧ್ಯೆ, ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ನಾರಾಯಣಗೌಡ, ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ರಾಜ್ಯಪಾಲರು ಮನವಿ ಪತ್ರವನ್ನು ಕೇಂದ್ರ ಗೃಹ ಇಲಾಖೆಗೆ ರವಾನಿಸುವುದಾಗಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ನಿರ್ಧಾರದ ಮೇಲೆ ಮುಂದಿನ ತೀರ್ಮಾನ ಮಾಡುವುದಾಗಿ ಸ್ಪಷ್ಟಪಡಿಸಿದರು…

Share Post

Leave a Reply

Your email address will not be published. Required fields are marked *

error: Content is protected !!