ಕೋಲಾರ : ನಗರದ ರಸ್ತೆಗಳ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ

ಕೋಲಾರ : ನಗರದ ಬಹುತೇಕ ರಸ್ತೆಗಳಲ್ಲಿ ಗುಂಡಿಗಳು ಬಿದ್ದು ಗದ್ದೆಯಂತಾಗಿದ್ದು ವಾಹನ ಸವಾರರು ತಮ್ಮ ಪ್ರಾಣವನ್ನು ಕೈಯಲ್ಲಿಡಿದು ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ಲೋಕೋಪಯೋಗಿ ಇಲಾಖೆ ಮತ್ತು ನಗರಸಭೆ ಅಧಿಕಾರಿಗಳ ಜಂಟಿ ಕಾರ್ಯಾಚರಣೆ ಅತೀ ಶೀಘ್ರದಲ್ಲಿ ನಡೆಯಬೇಕಿದೆ.

ನಗರದ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಬೇಕೆಂದು ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಹಾಗೂ ಸಾರ್ವಜನಿಕರು ರಸ್ತೆ ತಡೆ ನಡೆಸಿ ರಸ್ತೆಯಲ್ಲೇ ಪೈರು ನಾಟಿ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ನಗರದಿಂದ ಬೆಂಗಳೂರಿಗೆ ಹಾದು ಹೋಗುವ ಮುಖ್ಯ ರಸ್ತೆಯಾದ ಎಂ.ಬಿ ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸಿದರು.

ಕೋಲಾರ ಜಿಲ್ಲಾ ಕೇಂದ್ರವಾಗಿದ್ದು ರಾಜಧಾನಿ ಬೆಂಗಳೂರಿಗೆ ಪಕ್ಕದಲ್ಲೇ ಇದ್ದರೂ ರಸ್ತೆಗಳ ಅಭಿವೃದ್ಧಿ ಮಾತ್ರ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸುಮಾರು ವರ್ಷಗಳಿಂದ ರಸ್ತೆಗಳಲ್ಲಿ ಗುಂಡಿಗಳು ಬಿದ್ದು ದೊಡ್ಡ ದೊಡ್ಡ ಹಳ್ಳಗಳಾಗಿದ್ದು ಇಂತಹ ರಸ್ತೆಯಲ್ಲಿ ಸಂಚರಿಸುವ ವಾಹಗಳು ಸ್ವಲ್ಪ ಹೆಚ್ಚು ಕಡಿಮೆಯಾದ್ರು ಬಿದ್ದು ಪ್ರಾಣಕ್ಕೆ ಸಂಚಕಾರ ಉಂಟಾಗುತ್ತಿದ್ದರೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸಾರ್ವಜನಿಕರ ಕಣ್ಣೊರಿಸುವ ಸಲುವಾಗಿ ಗುಂಡಿ ಮುಚ್ಚುವ ಕೆಲಸಕ್ಕಷ್ಟೆ ಮುಂದಾಗುತ್ತಾರೆ. ಆದರೆ ರಸ್ತೆ ಡಾಂಬಾರೀಕರಣ ನಡೆಸಿ ಒಂದು ತಿಂಗಳು ಕಳೆಯುವುದರೊಳಗೆ ಆ ರಸ್ತೆಗಳು ಹಾಳಾಗುತ್ತಿದ್ದು ಕಳಪೆ ಕಾಮಗಾರಿ ನಡೆಸಿ ಸಾರ್ವಜನಿಕರ ತೆರಿಗೆ ಹಣವು ನುಂಗಣ್ಣರ ಪಾಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಈ ಕೂಡಲೇ ನಗರಸಭೆ ಅಧಿಕಾರಿಗಳು ಹಾಗೂ ಲೋಕೋಪಯೋಗಿ ಅಧಿಕಾರಿಗಳು ಎಚ್ಚೆತ್ತುಕೊಂಡು ನಗರದಲ್ಲಿರುವ ಎಲ್ಲಾ ರಸ್ತೆಗಳನ್ನು ಸರಿಪಡಿಸಬೇಕು ಇಲ್ಲಾವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟವನ್ನು ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಪ್ರತಿಭಟನಾ‌ ಸ್ಥಳಕ್ಕೆ ಆಗಮಿಸಿದ ಪಿಡಬ್ಲ್ಯೂ ಇಲಾಖೆಯ ಅಭಿಯಂತರರು ಭೇಟಿ ನೀಡಿ ತಕ್ಷಣದಲ್ಲಿ ಕೋಲಾರ ನಗರದಲ್ಲಿನ ಮೆಕ್ಕೆ ಸರ್ಕಲ್ ನಿಂದ ಬೈಪಾಸ್ ಸಂಪರ್ಕ ಹಾಗೂ ಮೆಕ್ಕೆ ಸರ್ಕಲ್ ನಿಂದ ಚಿಕ್ಕಬಳ್ಳಾಪುರ ಮಾರ್ಗದ ರಸ್ತೆ ಹಾಗೂ ಬಂಗಾರಪೇಟೆ ಮುಖ್ಯ ರಸ್ತೆಯಲ್ಲಿನ ಹಳ್ಳ ಮುಚ್ಚಿ ಸುಗಮ‌ ಸಂಚಾರಕ್ಕೆ ಅನುಕೂಲ ಮಾಡಲಾಗುವುದು ಎಂದು ಭರವಸೆ ನೀಡಿದರು.

Share Post

Leave a Reply

Your email address will not be published. Required fields are marked *

error: Content is protected !!