ಡಿಕೆಶಿ ಬಂಧನ ನನಗೆ ಸಂಬಂಧ ಇಲ್ಲದ ವಿಷಯ: ಡಿಸಿಎಂ ಗೋವಿಂದ ಕಾರಜೋಳ

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಇಂದು ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಭಟನೆ ನನಗೆ ಸಂಬಂಧ ಇಲ್ಲದ ವಿಷಯವಾಗಿದೆ.

ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಇಂದು ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಭಟನೆ ನನಗೆ ಸಂಬಂಧ ಇಲ್ಲದ ವಿಷಯವಾಗಿದೆ. ಹೀಗಾಗಿ ಸಿಲಿಕಾನ್ ಸಿಟಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಬಗ್ಗೆ ನಾನು ಪ್ರತಿಯಿಸಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.

ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಕ್ಕೆ ದಿಢೀರ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಡಿಕೆ.ಶಿವಕುಮಾರ್ ಬಂಧನ ಖಂಡಿಸಿ ಇಂದು ರಾಜಧಾನಿ ಬೆಂಗಳೂರಿನಲ್ಲಿ ಒಕ್ಕಲಿಗರ ಪ್ರತಿಭಟನೆ ನಡೆಸುತ್ತಿರುವ ವಿಚಾರವಾಗಿ ನಾನು ಮಾತನಾಡಲ್ಲ. ಅದು ನನಗೆ ಸಂಬಂಧ ಇಲ್ಲದ ವಿಷಯ. ದೇಶದಲ್ಲಿ ಕಾನೂನು ಕ್ರಮಗಳು ನಡೆಯುತ್ತಿರುತ್ತವೆ. ಅದರ ಬಗ್ಗೆ ಪ್ರತಿಕ್ರಿಯೆ ನೀಡಲ್ಲ ಎಂದು ತಿಳಿಸಿದರು.

Share Post

Leave a Reply

Your email address will not be published. Required fields are marked *

error: Content is protected !!