ಅತೃಪ್ತರ ಭವಿಷ್ಯ ಮತ್ತಷ್ಟು ಕಗ್ಗಂಟು; ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆ

ಕಾಂಗ್ರೆಸ್​-ಜೆಡಿಎಸ್​​ ಮೈತ್ರಿ ಸರ್ಕಾರವನ್ನು ಬೀಳಿಸಿದ್ದ ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್​ನಲ್ಲಿ ಭಾರೀ ಹಿನ್ನಡೆಯಾಗಿದೆ. ಸ್ಪೀಕರ್​​ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ತುರ್ತು ವಿಚಾರಣೆ ಮಾಡಲು ನ್ಯಾಯಲಯವೂ ನಿರಾಕರಿಸಿದೆ. ಅಲ್ಲದೇ ನ್ಯಾಯಲಯದಲ್ಲಿ ಎಲ್ಲಾ ಪ್ರಕರಣಗಳನ್ನು ಸರದಿಯ ಪ್ರಕಾರವೇ ವಿಚಾರಣೆ ನಡೆಸಲಾಗುತ್ತಿದೆ.

ಬೆಂಗಳೂರು: ಕಾಂಗ್ರೆಸ್​-ಜೆಡಿಎಸ್​​ ಮೈತ್ರಿ ಸರ್ಕಾರವನ್ನು ಬೀಳಿಸಿದ್ದ ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್​ನಲ್ಲಿ ಭಾರೀ ಹಿನ್ನಡೆಯಾಗಿದೆ. ಸ್ಪೀಕರ್​​ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ತುರ್ತು ವಿಚಾರಣೆ ಮಾಡಲು ನ್ಯಾಯಲಯವೂ ನಿರಾಕರಿಸಿದೆ. ಅಲ್ಲದೇ ನ್ಯಾಯಲಯದಲ್ಲಿ ಎಲ್ಲಾ ಪ್ರಕರಣಗಳನ್ನು ಸರದಿಯ ಪ್ರಕಾರವೇ ವಿಚಾರಣೆ ನಡೆಸಲಾಗುತ್ತಿದೆ. ನಿಮ್ಮ ಸರದಿ ಬರೆವವರೆಗೂ ಕಾಯಬೇಕು. ನೀವು ಹೇಳಿದಾಗೇ ಅರ್ಜಿ ತುರ್ತು ವಿಚಾರಣೆ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಎನ್ ವಿ ರಮಣ ತಿಳಿಸಿದ್ದಾರೆ.
ಅನರ್ಹ ಶಾಸಕರ ಅರ್ಜಿ ವಿಚಾರಣೆಗೆ ನಿಗದಿಯಾಗಿದ್ದ ದಿನಾಂಕ ರದ್ದು ಮಾಡಲಾಗಿತ್ತು. ರದ್ದು ಮಾಡಿದ ಸುಪ್ರೀಂ ಕೋರ್ಟ್​ ಆದೇಶ ಪ್ರಶ್ನಿಸುತ್ತಾ 17 ಅನರ್ಹ ಶಾಸಕರ ಅರ್ಜಿಯನ್ನು ಪಟ್ಟಿಯಲ್ಲಿ ಕೈಬಿಡದಂತೆ ಹಿರಿಯ ವಕೀಲ ರಾಕೇಶ್​​ ದ್ವಿವೇದಿ ಮನವಿ ಮಾಡಿದರು. ಅನರ್ಹ ಶಾಸಕರ ಪರ ವಕೀಲರ ಮನವಿಗೆ ಸುಪ್ರೀಂ ಕೋರ್ಟ್​ ಸ್ಪಂದಿಸಿಲ್ಲ. ಹಾಗಾಗಿ ಪ್ರಕರಣದ ವಿಚಾರಣೆ ನಡೆಯುವವರೆಗೂ ಯಾವ ತೀರ್ಪು ಬರಲಿದೆ ಎಂದು ಕಾದು ನೋಡಬೇಕಾದ ಪರಿಸ್ಥಿತಿ ಉಂಟಾಗಿದೆ. ಆದ್ದರಿಂದಲೇ ಅನರ್ಹ ಶಾಸಕರು ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಭಾರೀ ಆಂತಕಕ್ಕೀಡಾಗಿದ್ದಾರೆ.

Share Post

Leave a Reply

Your email address will not be published. Required fields are marked *

error: Content is protected !!