ಎಷ್ಟು ಚಿತ್ರಮಂದಿರಗಳಲ್ಲಿ ಪೈಲ್ವಾನ್ ಕುಸ್ತಿ ?

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷೆಯ ಚಿತ್ರ ‘ಪೈಲ್ವಾನ್’ ಇಂದು ದೇಶಾದ್ಯಂತ 3000 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆಕಂಡಿದೆ. ರಾಜ್ಯದಲ್ಲಿ ಬೆಳಗಿನ ಜಾವವೇ ಚಿತ್ರ ಪ್ರದರ್ಶನ ಆರಂಭವಾಗಿದೆ.

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷೆಯ ಚಿತ್ರ ‘ಪೈಲ್ವಾನ್’ ಇಂದು ದೇಶಾದ್ಯಂತ 3000 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆಕಂಡಿದೆ. ರಾಜ್ಯದಲ್ಲಿ ಬೆಳಗಿನ ಜಾವವೇ ಚಿತ್ರ ಪ್ರದರ್ಶನ ಆರಂಭವಾಗಿದೆ. ಬೆಂಗಳೂರಿನ ಸಿದ್ಧೇಶ್ವರ ಚಿತ್ರಮಂದಿರದಲ್ಲಿ ಬೆಳಿಗ್ಗೆ 5.30 ಕ್ಕೆ ಮೊದಲ ಶೋ ಆರಂಭವಾಗಿದೆ.

ಇನ್ನು ಮೆಜೆಸ್ಟಿಕ್ ಸಂತೋಷ್ ಚಿತ್ರಮಂದಿರದಲ್ಲಿ ಇದೇ ಮೊದಲ ಬಾರಿಗೆ 7.30 ಕ್ಕೆ ಮೊದಲ ಪ್ರದರ್ಶನ ನಡೆದಿದ್ದು, ನಟ ಸುದೀಪ್ ಅಭಿಮಾನಿಗಳೊಂದಿಗೆ ಸಿನಿಮಾ ವೀಕ್ಷಿಸಿದ್ದಾರೆ.

ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಭಾಷೆಗಳಲ್ಲಿ ಪೈಲ್ವಾನ್ ಗ್ರ್ಯಾಂಡ್ ಓಪನಿಂಗ್ ಪಡೆದುಕೊಂಡಿದೆ. ಸ್ವಪ್ನ ಕೃಷ್ಣ ನಿರ್ಮಾಣ ಮಾಡಿರುವ ಚಿತ್ರವನ್ನು ಕೃಷ್ಣ ನಿರ್ದೇಶಿಸಿದ್ದಾರೆ. ಸುದೀಪ್, ಸುನಿಲ್ ಶೆಟ್ಟಿ, ಆಕಾಂಕ್ಷ ಸಿಂಗ್, ಶರತ್ ಲೋಹಿತಾಶ್ವ, ಕಬೀರ್ ದುಹಾನ್ ಸಿಂಗ್ ಸೇರಿದಂತೆ ಬಹು ದೊಡ್ಡ ತಾರಾಗಣವೇ ಚಿತ್ರದಲ್ಲಿದೆ. 

ನಿರೀಕ್ಷೆಯಂತೆ ಚಿತ್ರ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.

Share Post

Leave a Reply

Your email address will not be published. Required fields are marked *

error: Content is protected !!