ನೀತಿ ಸಂಹಿತೆ ಜಾರಿಗೊಳಿಸುವಂತೆ ಗುಂಡೂರಾವ್ ರವರಿಂದ ಚುನಾವಣಾ ಆಯುಕ್ತರಿಗೆ ಪತ್ರ

ಬೆಂಗಳೂರು : ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಡಿಸೆಂಬರ್ 5 ರಂದು ದಿನಾಂಕ ಘೋಷಣೆಯಾಗಿದ್ದು, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೊಳಿಸುವಂತೆ ಒತ್ತಾಯಿಸಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೇಂದ್ರ ಚುನಾವಣಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಈ ಹಿಂದೆ ಚುನಾವಣಾ ಆಯೋಗ ಉಪಚುನಾವಣೆಗೆ ಮುಹೂರ್ತ ನಿಗದಿಪಡಿಸಿತ್ತು. ಆದರೆ ನವೆಂಬರ್ 11 ರಿಂದ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ಹೇಳಿದೆ. ಹೀಗಾಗಿ ದಿನೇಶ್ ಗುಂಡೂರಾವ್ ವಿರೋಧ ವ್ಯಕ್ತಪಡಿಸಿದ್ದು, ತಕ್ಷಣದಿಂದ ನೀತಿ ಸಂಹಿತೆ ಜಾರಿಗೊಳಿಸುವಂತೆ ಕೇಂದ್ರ ಚುನಾವಣಾ ಆಯೋಗವನ್ನು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಪತ್ರದಲ್ಲಿ ದಿನೇಶ್ ಗುಂಡೂರಾವ್, ಈ ನಿರ್ಧಾರದಿಂದ ಕೇಂದ್ರ ಮತ್ತು ರಾಜ್ಯದಲ್ಲಿರುವ ಆಡಳಿತರೂಢ ಪಕ್ಷಗಳಿಗೆ ಮತದಾರರ ಮೇಲೆ ಪರಿಣಾಮ ಬೀರಲು ಮುಕ್ತ ಅವಕಾಶ ಸಿಕ್ಕಿದಂತಾಗುತ್ತದೆ. ಜನಪ್ರತಿನಿಧಿ ಕಾಯ್ದೆಯ ಅನ್ವಯ ಇದು ಭ್ರಷ್ಟ ನಡವಳಿಕೆಯಾಗಿದೆ ಎಂದು ಅವರು ಪತ್ರದಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

Share Post

Leave a Reply

Your email address will not be published. Required fields are marked *

error: Content is protected !!