ಡಿಕೆಶಿ ಅವರ ನ್ಯಾಯಾಂಗ ಬಂಧನ ಅ.15ರ ವರೆಗೆ ವಿಸ್ತರಣೆ

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ.ಶಿವಕುಮಾರ್ ಅವರ ಅವರ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನಲೆಯಲ್ಲಿ ಇಂದು ಮತ್ತೆ ಇಡಿ ವಿಶೇಷ ನ್ಯಾಯಾಲಯದ ಮುಂದೆ ಡಿಕೆಶಿ ಹಾಜರಾದರು.

ಇದೇ ವೇಳೆ ಡಿಕೆಶಿ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮುಂದುವರಿಸುವುದು ಹಾಗೂ ಅಂತ್ಯಗೊಳಿಗೊಳಿಸುವುದಕ್ಕೆ ಸಂಬಂಧಪಟ್ಟಂತೆ ನ್ಯಾಯಾಧೀಶರಾದ ಇಡಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ನಿರ್ಧರಿಸಿದ್ದು, ಡಿಕೆಶಿಯವರು ಅ.15ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡುವುದಕ್ಕೆ ಆದೇಶ ನೀಡಿದರು.
ಕಳೆದ ಮೂರು ವಾರಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿಯನ್ನು ಕಳೆದ ಬುಧವಾರ ಇ.ಡಿ. ವಿಶೇಷ ನ್ಯಾಯಾಲಯ ತಿರಸ್ಕರಿಸಿತ್ತು. ಸದ್ಯ ಅವರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಅವರ ಜಾಮೀನು ಅರ್ಜಿ ವಿಚಾರಣೆ ಅಕ್ಟೋಬರ್.14ಕ್ಕೆ ನಡೆಯಲಿದೆ.

Share Post

Leave a Reply

Your email address will not be published. Required fields are marked *

error: Content is protected !!