ಅದ್ದೂರಿ ಮೆರವಣಿಗೆಯೊಂದಿಗೆ ವಾಲ್ಮೀಕಿ ಜಯಂತಿ ಆಚರಣೆ

ಕಲಬುರಗಿ : ಜಿಲ್ಲಾಡಳಿತದ ವತಿಯಿಂದ ಕಲಬುರ್ಗಿ ನಗರದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ವಾಲ್ಮೀಕಿ ಜಯಂತೋತ್ಸವ ಮೆರವಣಿಗೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಬಿ.ಶರತ್, ಪೊಲೀಸ್ ಕಮಿಷನರ್ ಎಂ.ಎನ್.ನಾಗರಾಜ್ ಅವರುಗಳು ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ವಾಲ್ಮೀಕಿ ಸಮುದಾಯದ ಮುಖಂಡರು ಮಹರ್ಷಿ ವಾಲ್ಮೀಕಿ ಅವರಿಗೆ ಜಯಘೋಷ ಕೂಗುತ್ತಾ ವಾಲ್ಮೀಕಿ ಭಾವಚಿತ್ರದೊಂದಿಗೆ ಅದ್ಧೂರಿ ಮೆರವಣಿಗೆ ನಡೆಸಿದರು.

ಮೆರವಣಿಗೆ ಕಾರ್ಯಕ್ರಮದಲ್ಲಿ ಮಹಿಳೆಯರು ತಲೆಯ ಮೇಲೆ ಪೂರ್ಣಕುಂಭ ಹೊತ್ತು ಸಾಗಿದರು. ಡೊಳ್ಳು ಕುಣಿತ, ತಮಟೆ ವಾದಕರು ಮೆರವಣಿಗೆಗೆ ಮೆರಗು ನೀಡಿದರು. ಮೆರವಣಿಗೆಯೂ ಎಸ್.ವಿ.ಪಿ. ವೃತ್ತದಿಂದ ಪಂಡಿತ ರಂಗ ಮಂದಿರದವರೆಗೂ ಸಾಗಿತು.

ಮೆರವಣಿಗೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣ ಮಾಲಾಜಿ, ಅಧಿಕಾರಿಗಳು, ವಾಲ್ಮೀಕಿ ಮುಖಂಡರು, ಮಹಿಳೆಯರು, ಯುವಕರು ಉತ್ಸಾಹದಿಂದ ಹೆಜ್ಜೆ ಹಾಕಿದರು.

Share Post

Leave a Reply

Your email address will not be published. Required fields are marked *

error: Content is protected !!