ಉಪ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು : ಸಿಎಂ ವಿಶ್ವಾಸ

ಬೆಳಗಾವಿ : ರಾಜ್ಯದ ಉಪಚುನಾವಣೆಯ 15 ಕ್ಷೇತ್ರದಲ್ಲಿ ಚುನಾವಣಾ ತಯಾರಿ ನಡೆದಿದ್ದು ಬಿಜೆಪಿಯು 15 ಕ್ಕೆ 15 ಕ್ಷೇತ್ರಗಳಲ್ಲೂ ಗೆಲವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು ಮುಂಬರುವ ಉಪಚುನಾವಣೆ ಬಿಜೆಪಿಗೆ ಮಹತ್ತರವಾಗಿದ್ದು 15 ಕ್ಷೇತ್ರಗಳಿಗೂ ಒಬ್ಬೊಬ್ಬ ಸಚಿವರನ್ನು ಮುಖ್ಯಸ್ಥರನ್ನಾಗಿ ನೇಮಕ ಮಾಡಿದ್ದು ಗೆಲುವು ನಮ್ಮದೆ. ಅನರ್ಹ ಶಾಸಕರ ಪ್ರಕರಣ ಸುಪ್ರಿಂ ಕೋರ್ಟ್ ನಲ್ಲಿದ್ದು 22ಕ್ಕೆ ಕೋರ್ಟ್ ನೀಡುವ ತೀರ್ಪಿನ ನಂತರ ಅಭ್ಯರ್ಥಿಗಳ ಹೆಸರಿನ ಪಟ್ಟಿಯನ್ನು ಹೈಕಮಾಂಡನೊಂದಿಗೆ ಚರ್ಚಿಸಿ ಪ್ರಕಟ ಮಾಡಲಾಗುವುದು ಎಂದು ತಿಳಿಸಿದರು‌.

ಹಿಂದಿನ ಸರಕಾರ ಮಾಡಿರುವ ಸಾಲ ಮನ್ನಾ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಹಿಂದಿನ ಸರಕಾರ ಮಾಡಿರುವುದೇ ದೊಡ್ಡ ಹೊರೆಯಾಗಿದ್ದು ಅದರ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಿದ್ದೇವೆ ಎಂದು ಹೇಳಿದರು.

ರಾಜ್ಯದಲ್ಲಿ ಈ ಸಲ ದೊಡ್ಡ ಪ್ರಮಾಣದಲ್ಲಿ ಪ್ರವಾಹ ಬಂದಿದೆ. ಅದರ ಪರಿಶೀಲನೆ ನಡೆಯುತ್ತಿದೆ. ನೂರಕ್ಕೆ ನೂರು ಪ್ರವಾಹ ಪೀಡಿತ ಗ್ರಾಮಗಳು ಸ್ಥಳಾಂತರಕ್ಕೆ ಮುಂದೆ ಬಂದರೆ ಆ ಗ್ರಾಮಗಳನ್ನು ಸ್ಥಳಾಂತರ ಮಾಡುತ್ತೇವೆ ಎಂದರು.

ಇವತ್ತಿನ ಹಣಕಾಸಿನ‌ ಪರಿಸ್ಥಿತಿಯಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲು ಆಗುವುದಿಲ್ಲ. ಎಲ್ಲಾ ಅಭಿವೃದ್ಧಿ ಕಾರ್ಯಕ್ರಮ ರದ್ದು ಮಾಡಿ ಪ್ರವಾಹ ಪುನರ್ವಸತಿಗೆ ಅನುದಾನ ಡೈವರ್ಟ್ ಮಾಡಲಾಗುತ್ತಿದೆ ಎಂದರು.

ಅಂತರಾಜ್ಯ ಸಮಸ್ಯೆಗಳಿಗೆ ಪ್ರತಿಕ್ರಿಯಿಸಿ ಚುನಾವಣೆ ಬಳಿಕ ಅಂತರಾಜ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುತ್ತೇನೆ ನೀರಿನ ಸಮಸ್ಯೆಯ ಜೊತೆಗೆ ಇತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತೇವೆ ಎಂದರು.

Share Post

Leave a Reply

Your email address will not be published. Required fields are marked *

error: Content is protected !!