2.93 ಕೋಟಿ ಮೊತ್ತದ ಕಾಮಗಾರಿಗಳಿಗೆ ಶಾಸಕ ಎನ್.ಮಹೇಶ್ ಚಾಲನೆ

ಕೊಳ್ಳೇಗಾಲ : ನಗರ ವ್ಯಾಪ್ತಿ ಹಾಗೂ ವಿವಿಧ ಗ್ರಾಮಗಳಲ್ಲಿ ಒಟ್ಟು 2.93 ಕೋಟಿ ಮೊತ್ತದ ಏಳು ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎನ್.ಮಹೇಶ್ ಗುದ್ದಲಿಪೂಜೆ ನೆರವೇರಿಸಿದರು.

ನಗರದ ಮುಡಿಗುಂಡ ಹಾಗೂ ಬೆಂಡ್ರಳ್ಳಿ ವಾರ್ಡ್‌ಗಳಲ್ಲಿ ಎಸ್‌ಸಿಪಿ ಯೊಜನೆಯಡಿಯಲ್ಲಿ ಸಿಸಿ ರಸ್ತೆ ಮತ್ತು ಚರಂಡಿಗಳ ಕಾಮಗಾರಿಗಳಿಗೆ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸೇರಿ ಬೂಮಿ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು.

ಹರಳೆ ಗ್ರಾಮದ ನಾಯಕರ ಬಡಾವಣೆಯಲ್ಲಿ TSP ಯೋಜನೆಯಡಿಯಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿ, ಹೊಸಹಂಪಪುರ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ ಕಟ್ಟಡ ಕಾಮಗಾರಿ, ಗೊಬ್ಬಳೀಪುರ ಗ್ರಾಮದಲ್ಲಿ ಡಾಂಬರ್ ರಸ್ತೆ ಕಾಮಗಾರಿ, ಟಗರುಪುರು ಹಾಗೂ ಮೆಲ್ಲಹಳ್ಳಿಮಾಳ ಗ್ರಾಮಗಳಲ್ಲಿ SCP ಯೋಜನೆಯಡಿಯಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗಳಿಗೆ ಗುದ್ದಲಿಪೂಜೆ ಮಾಡಿ ಚಾಲನೆ ನೀಡಿದರು. ಈ ವೇಳೆ ಶಾಸಕ ಎನ್.ಮಹೇಶ್ ಅವರಿಗೆ ಕುಂತೂರು ಜಿ.ಪಂ ಸದಸ್ಯ ಎಲ್.ನಾಗರಾಜು(ಕಮಲ್) ಜೊತೆಯಾಗಿದ್ದರು.

ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಶಾಸಕ ಎನ್.ಮಹೇಶ್ ಪ್ರತಿಯೊಂದು ಕಾಮಗಾರಿಯು ಉತ್ತಮ ಗುಣಮಟ್ಟದಿಂದ ಕೂಡಿರುವಂತೆ ಗುತ್ತಿಗೆದಾರರುಗಳಿಗೆ ತಾಕೀತು ಮಾಡಿದರು.

ಗ್ರಾಮಗಳಲ್ಲಿ ಇನ್ನೂ ವಿವಿಧ ರೀತಿಯ ಅಭಿವೃದ್ಧಿ ಕಾಮಗಾರಿಗಳು ಆಗಬೇಕಿದ್ದು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ನೆರವೇರಿಸಲಾಗುವುದು ಎಂದು ಹೇಳಿದರು.

ಇದೇ ವೇಳೆ ಹಂಪಾಪುರ ಗ್ರಾಮದಲ್ಲಿ ಅನೈರ್ಮಲ್ಯ ಹಾಗೂ ಮೂಲಭೂತ ಸೌಕರ್ಯಗಳ ಕೊರತೆ ಕುರಿತು ಗ್ರಾಮ ಪಂಚಾಯ್ತಿ ವಿರುದ್ಧ ಗ್ರಾಮದ ಯುವಕರು ಅಸಮಾಧಾನ ವ್ಯಕ್ತಪಡಿಸಿ ಸಮಸ್ಯೆಗಳ ಕುರಿತು ಶಾಸಕರಿಗೆ ತಮ್ಮ ಮನವಿ ಪತ್ರ ನೀಡಿದರು. ಈ ಕುರಿತು ಪ್ರತಿಕ್ರಯಿಸಿದ ಎನ್.ಮಹೇಶ್ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಗ್ರಾಮದ ಸಮಸ್ಯೆಗಳನ್ನು ಪರಿಹರಿಸುವಂತೆ ತಿಳಿಸುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ತಾ.ಪಂ ಉಪಾಧ್ಯಕ್ಷೆ ಲತಾರಾಜಣ್ಣ, ತಾ.ಪಂ ಸದಸ್ಯ ಕೃಷ್ಣಪ್ಪ, ನಗರಸಭೆ ಸದಸ್ಯೆ ಪುಷ್ಪಲತಾ ಶಾಂತರಾಜು, ಭೂ ಸೇನಾ ನಿಗಮದ ಎಇಇ ರಮೇಶ್, ಎಇ ಶೋಭ.ಪಿ, ಶಂಕನಪುರ ಜಗದೀಶ್, ಗುತ್ತಿಗೆದಾರರುಗಳಾದ ಅಯ್ಯೂಬ್, ಮಹಾದೇವ, ಪ್ರದೀಪ್ ಮತ್ತಿತರರಿದ್ದರು.

Share Post

Leave a Reply

Your email address will not be published. Required fields are marked *

error: Content is protected !!