ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ 12 ಕ್ಕೂ ಹೆಚ್ಚು ಸ್ಥಾನ : ವೀರಪ್ಪ ಮೊಯಿಲಿ

ಕೆ.ಆರ್.ಪೇಟೆ : ಕಾಂಗ್ರೆಸ್ ಪಕ್ಷ ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದೊಂದಿಗೆ ಯಾವುದೇ ಒಳ ಒಪ್ಪಂದ ಮಾಡಿಕೊಂಡಿಲ್ಲ. ಕಾಂಗ್ರೆಸ್ 15 ಕ್ಷೇತ್ರಗಳಲ್ಲೂ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕೆ.ಆರ್.ಪೇಟೆ, ಹುಣಸೂರು ಸೇರಿದಂತೆ 12ಕ್ಕೂ ಹೆಚ್ಚು ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಸಿಎಂ ವೀರಪ್ಪ ಮೊಯಿಲಿ ವಿಶ್ವಾಸ ವ್ಯಕ್ತಪಡಿಸಿದರು.

ಕೆ.ಆರ್.ಪೇಟೆಯಲ್ಲಿ ಉಪ ಚುನಾವಣೆ ಹಿನ್ನಲೆ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಅವರು ಬಳಿಕ ಸುದ್ದಿಗಾರರೊಡನೆ ಮಾತನಾಡಿದರು.

ಮಹಾರಾಷ್ಟ್ರದಲ್ಲಿ ಬಿಜೆಪಿ ಬಹುಮತವಿಲ್ಲದಿದ್ದರೂ ಅಧಿಕಾರದಾಸೆಗಾಗಿ ಮುಖ್ಯಮಂತ್ರಿ ಸ್ಥಾನ ಪಡೆದು ಮತ್ತೆ ಒಂದೇ ದಿನದಲ್ಲಿ ರಾಜೀನಾಮೆ ನೀಡಿ ನಗೆಪಾಟಲಿಗೆ ಗುರಿಯಾಗಿದೆ ಎಂದು ಟೀಕಿಸಿದರು.

ರಾಜ್ಯದಲ್ಲೂ ಮಹಾರಾಷ್ಟ್ರದ ಪರಿಸ್ಥಿತಿಯೇ ನಿರ್ಮಾಣವಾಗಲಿದೆ. ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷವು ಅಗತ್ಯ ಬಹುಮತಕ್ಕೆ ಬೇಕಾದ ಶಾಸಕರನ್ನು ಗೆಲ್ಲಿಸಿಕೊಳ್ಳಲಾಗದೇ ಸಿಎಂ ಯಡಿಯೂರಪ್ಪ ಅವರು ರಾಜೀನಾಮೆ ನೀಡಬೇಕಾದ ಸಂದರ್ಭ ನಿರ್ಮಾಣವಾಗಲಿದೆ. ರಾಜ್ಯಾದ್ಯಂತ ಕಾಂಗ್ರೆಸ್ ಪರ ಅಲೆ ಜೋರಾಗಿ ಬೀಸುತ್ತಿದ್ದು ಡಿಸೆಂಬರ್ 9 ರ ನಂತರ ರಾಜ್ಯದ ಬಿಜೆಪಿ ಸರ್ಕಾರ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದರು.

ಕೆ.ಆರ್.ಪೇಟೆಯಲ್ಲಿ ಮೇಲ್ನೋಟಕ್ಕೆ ತ್ರಿಕೋನ ಸ್ಪರ್ಧೆ ಕಂಡು ಬಂದಿದ್ದು ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ನಿಜವಾದ ಸ್ಪರ್ಧೆ ಇದೆ ಎಂದರು. ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಹಣದ ಹೊಳೆ ಹರಿಸಿದರೂ ಮೂರನೇ ಸ್ಥಾನದಿಂದ ಮೇಲೆ ಬರಲು ಸಾಧ್ಯವಿಲ್ಲ. ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್ ಗೆಲುವು ಸಾಧಿಸಲಿದ್ದಾರೆ‌‌ ಎಂದು ಹೇಳಿದರು.

Share Post

Leave a Reply

Your email address will not be published. Required fields are marked *

error: Content is protected !!