ನೆರೆ ಸಂತ್ರಸ್ತರಿಂದ ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ

ರಾಯಬಾಗ : ಕಳೆದ 14 ವರ್ಷಗಳ‌ ಹಿಂದೆ ಸರ್ಕಾರದ ವತಿಯಿಂದ ನೆರೆ ಸಂತ್ರಸ್ತರಿಗಾಗಿ ನಿರ್ಮಾಣ ಮಾಡಿದ್ದ ಮನೆಗಳನ್ನು ಅಧಿಕಾರಿಗಳು ಅರ್ಹ ಫಲಾನುಭವಿಗಳಿಗೆ ನೀಡದೆ ಅನ್ಯರಿಗೆ ನೀಡಿ ನೀಡಿ ಕೈ ತೊಳೆದುಕೊಂಡಿದ್ದಾರೆ ಎಂದು ಆರೋಪಿಸಿ ಭಿರಡಿ ಗ್ರಾಮದ ನೆರೆ ಸಂತ್ರಸ್ತರು ಅಹೋರಾತ್ರಿ ಧರಣಿ ನಡೆಸಿದ್ದಾರೆ.

ಹೌದು ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಭಿರಡಿ ಗ್ರಾಮದ ನೆರೆ ಸಂತ್ರಸ್ತರು ತಮಗೆ ಅನ್ಯಾಯವಾಗಿದೆ ಎಂದು ಅಧಿಕಾರಿಗಳ ವಿರುದ್ಧವಾಗಿ ಭಿರಡಿ ಗ್ರಾಮ ಪಂಚಾಯತಿಗೆ ಬೀಗ ಜಡಿದು ಪ್ರತಿಭಟಿಸಿದರು.

2005 ರಲ್ಲಿ ಸಂಭವಿಸಿದ ಕೃಷ್ಣಾ ನದಿ ಪ್ರವಾಹ ಸಂತ್ರಸ್ತರಿಗೆ ಭಿರಡಿ ಗ್ರಾಮದ ರಿ.ಸ.ನಂ.21 ರಲ್ಲಿ ನಿರ್ಮಿಸಲಾದ ಮನೆಗಳನ್ನು ಅರ್ಹ ಸಂತ್ರಸ್ತರಿಗೆ ನೀಡುವಂತೆ ಒತ್ತಾಯಿಸಿ ಚಿಕ್ಕೋಡಿ ಉಪವಿಭಾಗಾಧಿಕಾರಿಗಳಿಗೆ ಮತ್ತು ತಾ.ಪಂ. ಅಧಿಕಾರಿಗಳಿಗೆ ಹತ್ತಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

2005 ರಲ್ಲಿ ನಿರ್ಮಾಣವಾದ ನೆರೆ ಸಂತ್ರಸ್ತರ ಮನೆಗಳಲ್ಲಿ ಅನಧಿಕೃತವಾಗಿ ನೆಲೆಸಿರುವ ಅನರ್ಹ ಫಲಾನುಭವಿಗಳನ್ನು ತಕ್ಷಣ ಅಧಿಕಾರಿಗಳು ತೆರವು ಮಾಡಿಸಿ ಅರ್ಹ ಸಂತ್ರಸ್ತ ಫಲಾನುಭವಿಗಳಿಗೆ ನೀಡುವವರೆಗೆ ಧರಣಿ ನಡೆಸುವುದಾಗಿ ಎಚ್ಚರಿಸಿದ್ದಾರೆ. ಧರಣಿ ವೇಳೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Share Post

Leave a Reply

Your email address will not be published. Required fields are marked *

error: Content is protected !!