ಕಾಗವಾಡ ಬೈಎಲೆಕ್ಷನ್‌ : ಕಾಂಗ್ರೆಸ್ ಅಭ್ಯರ್ಥಿ ರಾಜು ಕಾಗೆ ಮತದಾನ


ಚಿಕ್ಕೋಡಿ : ಇಂದು ರಾಜ್ಯದ 15 ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ. ಕಾಗವಾಡ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಾಜು ಕಾಗೆ ಮತದಾನ ಮಾಡಿದ್ದಾರೆ. ಕ್ಷೇತ್ರದ ಉಗಾರ ಖರ್ದ್ ಪಟ್ಟಣದಲ್ಲಿರುವ ಎಸ್ಎಚ್‌ವಿ ಕಾಲೇಜಿನ ಮತಗಟ್ಟೆಗೆ ಆಗಮಿಸಿ ರಾಜು ಕಾಗೆ ಮತದಾನ ಮಾಡಿದರು.

ಕಾಗವಾಡ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಶ್ರೀಮಂತ್ ಪಾಟೀಲ್, ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಕಾಗೆ, ಜೆಡಿಎಸ್ ಅಭ್ಯರ್ಥಿಯಾಗಿ ಶ್ರೀಶೈಲ ತುಗಶೆಟ್ಟಿ ಸೇರಿದಂತೆ 10 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಕಾಗವಾಡದಲ್ಲಿ 231 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ಇಂದು ಬೆಳಗ್ಗೆ 7ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಮತದಾನ ನಡೆಯಲಿದೆ

Share Post

Leave a Reply

Your email address will not be published. Required fields are marked *

error: Content is protected !!