ಮಾಜಿ ಸಿಎಂ ಸಿದ್ದು , ದಿನೇಶ್ ಗುಂಡೂರಾವ್ ರಾಜೀನಾಮೆ : ಕಾಂಗ್ರೆಸ್‌ಗೆ ಹಿನ್ನಡೆ

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ತಮ್ಮ ಸ್ಥಾನಗಳಿಗೆ ರಾಜೀನಾಮೆ‌ ಸಲ್ಲಿಸಿರುವುದಾಗಿ ಘೋಷಣೆ ಮಾಡಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ ಎನ್ನಬಹುದಾಗಿದೆ.

ವಿರೋಧ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಮಾಜಿ‌ ಸಿಎಂ ಸಿದ್ದು ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ತಮ್ಮ ರಾಜೀನಾಮೆಗಳನ್ನು ಸಲ್ಲಿಸಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ತಮ್ಮ ನಿರ್ಧಾರಗಳನ್ನು ಘೋಷಿಸಿದ್ದಾರೆ. ಈ ಸಂಬಂಧ ಮಾತನಾಡಿದ ಸಿದ್ದರಾಮಯ್ಯ ಪಕ್ಷದ ಹಿತದೃಷ್ಟಿಯಿಂದ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ಸಿದ್ದರಾಮಯ್ಯ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಅಲ್ಲದೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರಿಗೂ ಒಂದು ಪ್ರತಿ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಈ ಇಬ್ಬರು ಹಿರಿಯ ಮುಖಂಡರ ರಾಜೀನಾಮೆಗಳನ್ನು ಅಂಗೀಕಾರ ಮಾಡಿದರೆ ತೆರವಾಗುವ ಸ್ಥಾನಗಳಿಗೆ ನಂತರ ಯಾರು ಆಯ್ಕೆಯಾಗುತ್ತರೆ ಎಂಬುದನ್ನು ಕಾದು ನೋಡಬೇಕಿದೆ.

Share Post

Leave a Reply

Your email address will not be published. Required fields are marked *

error: Content is protected !!