ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

ವಿಜಯಪುರ : ಕೆರೆಯಲ್ಲಿ ಆಟವಾಡುತ್ತಿದ್ದ ಇಬ್ಬರು ಬಾಲಕರು ಕಾಲುಜಾರಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ತಳೇವಾಡ ಗ್ರಾಮದಲ್ಲಿ ನಡೆದಿದೆ.

ಸುದೀಪ್(10) ಮಾಳಪ್ಪ(10) ಮೃತ ಬಾಲಕರು. ಕೆರೆಯಲ್ಲಿ ಆಟವಾಡುತ್ತಿದ್ದ ವೇಳೆ ಕಾಲುಜಾರಿ ಬಿದ್ದಿದ್ದು ಈಜಲು ಬಾರದೆ ನೀರುಪಾಲಾಗಿದ್ದ ಬಾಲಕರು ಇಂದು ಶವವಾಗಿ ಪತ್ತೆಯಾಗಿದ್ದಾರೆ‌.

ಸ್ಥಳದಲ್ಲಿ ಮೃತ ಬಾಲಕರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನೆ ಸ್ಥಳಕ್ಕೆ ಕೂಡಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Share Post

Leave a Reply

Your email address will not be published. Required fields are marked *

error: Content is protected !!