ಪ್ರತ್ಯೇಕ ಬಸ್ ಲೇನ್ ಬಗ್ಗೆ ಜಾಗೃತಿ ಮೂಡಿಸಿದ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ

ಬೆಂಗಳೂರು : ಪ್ರತ್ಯೇಕ ಬಸ್ ಲೇನ್ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ನಡೆದ ಕಾರ್ಯಕ್ರಮದಲ್ಲಿ ಖುದ್ದು ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ರಸ್ತೆಗಿಳಿದರು.

ಸಿಟಿಜೆನ್ಸ್ ಫಾರ್ ಬೆಂಗಳೂರು ಮತ್ತು ಬಿಎಂಟಿಸಿ ಸಹಯೋಗದಲ್ಲಿ ಪ್ರತ್ಯೇಕ ಬಸ್ ಪಥದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯವನ್ನು ಇಂದು ಮಾರತ್ತಹಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಹಾಗೂ ಸಾಫ್ಟ್ ವೇರ್ ಉದ್ಯೋಗಿಗಳು ಒಟ್ಟುಗೂಡಿ ವಾಹನಸವಾರರಿಗೆ ಮತ್ತು ಸಾರ್ವಜನಿಕರಿಗೆ ಬಸ್ ಲೇನ್ ಬಗ್ಗೆ ಅರಿವು ಮೂಡಿಸಿದರು.

ಇದೇ ವೇಳೆ ಬಿಎಂಟಿಸಿ ಬಸ್‌ಗಳನ್ನು ಬಳಸುವುದರಿಂದ ಸಮಯ ಉಳಿತಾಯ‌ ಮಾಡಬಹುದು. ಟ್ರಾಫಿಕ್ ಸಮಸ್ಯೆಗೆ ಕಡಿವಾಣ ಹಾಕಬಹುದು ಎಂದು ಬಿತ್ತಿ ಪತ್ರಗಳನ್ನು ನೀಡಿದ‌ ನಂದೀಶ್ ರೆಡ್ಡಿ ಈ ಮೂಲಕ ಜಾಗೃತಿ ಮೂಡಿಸಿದರು.

Share Post

Leave a Reply

Your email address will not be published. Required fields are marked *

error: Content is protected !!