ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಗೆ ವೇದಿಕೆ ಸಜ್ಜು ..!?

ಹೊಸಕೋಟೆ : ಕ್ಷೇತ್ರದ ನೂತನ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ನೆನ್ನೆ ರಾತ್ರಿ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಅವರ ಸ್ವಗೃಹದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತ್ರೀವ ಚರ್ಚೆಗೆ ಗ್ರಾಸವಾಗಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ರಮೇಶ್‌ ಕುಮಾರ್ ಸ್ವಗ್ರಾಮ ಅಡ್ಡಗಲ್ ನಲ್ಲಿ ನೆನ್ನೆ ರಾತ್ರಿ 8 ಗಂಟೆಗೆ ಅಗಮಿಸಿ ಮುಕ್ಕಾಲು ಗಂಟೆಗಳ ಕಾಲ ಬೆಂಬಲಿಗರಿಲ್ಲದೆ ಗುಟ್ಟಾಗಿ ಪರಸ್ಪರ ಚರ್ಚೆ ನಡೆಸಿದ್ದಾರೆ.

ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರನ್ನು ಬಂಡಾಯ ಬಿಜೆಪಿ ಅಭ್ಯರ್ಥಿಯಾಗಿ ಸೋಲಿಸಿದ ಹಿನ್ನೆಲೆ ಬಿಜೆಪಿ ಸೇರ್ಪಡೆಗೆ ಎಂಟಿಬಿ ನಾಗರಾಜ್ ತ್ರೀವವಾಗಿ ವಿರೋಧ ವ್ಯಕ್ತಪಡಿಸಿದ್ದರು.

ಸಿಎಂ ಯಡಿಯೂರಪ್ಪ ಕೂಡ ಯಾವುದೇ ಕಾರಣಕ್ಕೂ ಶರತ್ ಬಚ್ಚೇಗೌಡ ಅವರನ್ನು ಮತ್ತೆ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳವುದಿಲ್ಲ ಎಂದಿದ್ದರು‌.

ಬಿಜೆಪಿ ಬಾಗಿಲು ಬಂದ್ ಆದ ಹಿನ್ನೆಲೆಯಲ್ಲಿ ತಮ್ಮ ರಾಜಕೀಯ ಭವಿಷ್ಯದ ಚಿಂತನೆಯಲ್ಲಿ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಇನ್ನೂ ಶರತ್ ತಂದೆ ಸಂಸದ ಬಿ.ಎನ್. ಬಚ್ಚೇಗೌಡ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಜನತಾ ಪರಿವಾರದಿಂದ ಬಂದ ನಾಯಕರು. ಜನತಾದಳ ಇಬ್ಭಾಗವಾದ ವೇಳೆ ರಾಜಕೀಯ ಭವಿಷ್ಯಕ್ಕಾಗಿ ರಮೇಶ್ ಕುಮಾರ್ ಕಾಂಗ್ರೆಸ್ ಸೇರ್ಪಡೆಯಾದರೆ, ಬಚ್ಚೇಗೌಡ ಬಿಜೆಪಿ ಸೇರಿದ್ದರು.

ದೇವೇಗೌಡರ ಬದ್ಧ ವೈರಿಗಳಾಗಿದ್ದ ಇವರಿಬ್ಬರೂ ಅಂದಿನಿಂದಲೂ ಸ್ನೇಹಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಗೆ ವೇದಿಕೆ ಸಿಕ್ಕಿದೆ ಎನ್ನಲಾಗುತ್ತಿದೆ.

  • ಸಾಯಿನಾಥ್ ದರ್ಗಾ ದಿ ನ್ಯೂಸ್24 ಕನ್ನಡ

Share Post

Leave a Reply

Your email address will not be published. Required fields are marked *

error: Content is protected !!