ಬಾಳಿಗಾನಹಳ್ಳಿ ಗ್ರಾಮ ಪಂಚಾಯ್ತಿಗೆ ಮಮತಾ ಮುರಳಿ ನೂತನ ಅಧ್ಯಕ್ಷೆ

ಕೋಲಾರ/ಮಾಲೂರು ಸುದ್ದಿ

ಡಿ.23 – ಮಾಲೂರು ತಾಲ್ಲೂಕಿನ ಲಕ್ಕೂರು ಹೋಬಳಿಯ ಬಾಳಿಗಾನಹಳ್ಳಿ ಗ್ರಾಮ ಪಂಚಾಯ್ತಿಗೆ ತೆರುವಾಗಿದ್ದ ಅಧ್ಯಕ್ಷರ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು.

ಬಾಳಿಗಾನಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಮಮತಾ ಮುರಳಿ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ರಾಜೇಶ್ ರವರು ಘೋಷಣೆ ಮಾಡಿದ್ದಾರೆ.

ನೂತನ ಅಧ್ಯಕ್ಷೆ ಮಮತಾ ಮುರಳಿ ರವರು ಮಾತನಾಡಿ ಬಾಳಿಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಹಳ್ಳಿಗಳಿಗೆ ಚರಂಡಿ ವ್ಯವಸ್ಥೆ ಕುಡಿಯುವ ನೀರು ಬೀದಿ ದೀಪಗಳು ಹಾಗೂ ಮೂಲ ಭೂತ ಸೌಕರ್ಯಗಳಿಗೆ ಹೇಚ್ಚು ಒತ್ತು ಕೊಡಲಾಗುವುದು ಹಾಗೂ ನನ್ನನ್ನು ಅವಿರೋಧವಾಗಿ ಆಯ್ಕೆಮಾಡಿದ್ದ ಎಲ್ಲಾ ಸದಸ್ಯರುಗಳಿಗೆ ಧನ್ಯವಾದಗಳು ತಿಳಿಸಿದರು. ನಾನು ಹಾಗೂ ಎಲ್ಲಾ ಸದಸ್ಯರು ಒಟ್ಟುಗೂಡಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯ ಭಾಗ್ಯವತಿ ಅಗ್ರಿ ನಾರಾಯಣಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಕೆ.ರವಿಶಂಕರ್, ಮುಖಂಡ ಪ್ರಭಾಕರ್, ಶ್ರೀನಿವಾಸ್ ಹಾಗೂ ಗ್ರಾಮ ಪಂಚಾಯ್ತಿ ಸದಸ್ಯರು ಇನ್ನಿತರರು ಉಪಸ್ಥಿತರಿದ್ದರು.

Share Post

Leave a Reply

Your email address will not be published. Required fields are marked *

error: Content is protected !!