ಅಪ್ರಾಪ್ತೆಯ ಅತ್ಯಾಚಾರಿಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ ನ್ಯಾಯಾಲಯ

ಕೋಲಾರ ವರದಿ

ಜನವರಿ, 17 – ಅಪ್ರಾಪ್ತೆ ಮೇಲೆ ಅತ್ಯಾಚಾರಗೈದಿದ್ದ 65 ರ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ ಕೋಲಾರದ 2 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಕೋಲಾರ ತಾಲ್ಲೂಕಿನ ಬೈರಂಡಹಳ್ಳಿಯ ನಿವಾಸಿ ವೆಂಕಟೇಶಪ್ಪ ಗಲ್ಲು ಶಿಕ್ಷೆಗೆ ಒಳಗಾಗಿರುವ ಅಪರಾಧಿ. ಈತ 2018 ಮೇ ತಿಂಗಳ 1 ನೇ ತಾರೀಖು ಸ್ವಗ್ರಾಮದಲ್ಲಿನ ಅಪ್ರಾಪ್ತೆಯನ್ನು ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದರು. ವೆಂಕಟೇಶಪ್ಪನ ವಿರುದ್ಧ ವೇಮಗಲ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಸಂತ್ರಸ್ತರ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಮುನಿಸ್ವಾಮಿಗೌಡ ವಾದ ಮಂಡಿಸಿದ್ದರು. ಇದೀಗ ವಾದ ವಿವಾದಗಳು ಮುಗಿದು ನ್ಯಾಯಾಧೀಶೆ ಬಿ.ಎಸ್.ರೇಖಾ ಅವರು ಅತ್ಯಾಚಾರಿಗೆ ಮರಣದಂಡನೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.

Share Post

Leave a Reply

Your email address will not be published. Required fields are marked *

error: Content is protected !!