ಸಮೀಕ್ಷೆಗಳ ಪ್ರಕಾರ ದಿಲ್ಲಿಯಲ್ಲಿ ಯಾವ ಪಕ್ಷಕ್ಕೆ ಎಷ್ಟೆಷ್ಟು ಸೀಟು ಸಂಪೂರ್ಣ ಮಾಹಿತಿ

ಹೊಸದಿಲ್ಲಿ ರಾಜ್ಯ ರಾಜಕೀಯ

ಫೆಬ್ರವರಿ, 04 – ದಿಲ್ಲಿಯ 70 ವಿಧಾನಸಭಾ ಕ್ಷೇತ್ರಗಳ ಪೈಕಿ ಕಳೆದ ಬಾರಿ 67 ಕ್ಷೇತ್ರಗಳನ್ನು ಗೆದ್ದು ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದ ಆಮ್‌ ಆದ್ಮಿ ಪಕ್ಷ ಈ ಬಾರಿ 54-60 ಸ್ಥಾನಗಳನ್ನು ಗೆದ್ದು ಬೀಗಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ.

ಇದೇ 8 ರಂದು ನಡೆಯಲಿರುವ ದಿಲ್ಲಿ ವಿಧಾನಸಭೆ ಚುನಾ­ವಣೆ ಹಿನ್ನಲೆ ಟೈಮ್ಸ್‌ ನೌ, ಐಪಿಎಸ್‌ಒಎಸ್‌ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿವೆ. ಸಮೀಕ್ಷೆಯಲ್ಲಿ ಆಪ್ ಮತ್ತೊಮ್ಮೆ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆಂದು ಭವಿಷ್ಯ ನುಡಿದಿವೆ.

ಕಳೆದ ಚುನಾವಣೆಯಲ್ಲಿ ಕೇವಲ 03 ಸ್ಥಾನಗಳನ್ನು ಪಡೆದಿದ್ದ ಬಿಜೆಪಿ ಈ ಬಾರಿ ಕೊಂಚ ಸುಧಾರಿಸುತ್ತವೆ ಎನ್ನುತ್ತಿವೆ ಸಮೀಕ್ಷೆಗಳು. ಈ ಬಾರಿ 10 ರಿಂದ 14 ಸೀಟುಗಳು ಪಡೆಯುವ ಸಾಧ್ಯತೆಗಳಿವೆ.

ಇನ್ನು ಕಾಂಗ್ರೆಸ್ ಪಕ್ಷಕ್ಕೆ 0-2 ಸ್ಥಾನಗಳು ಲಭಿಸುವ ಸಾಧ್ಯತೆಗಳಿವೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯ ಸಾಧನೆ‌ ಮಾಡಿತ್ತು.

Share Post

Leave a Reply

Your email address will not be published. Required fields are marked *

error: Content is protected !!