ನಮಗೆ ಮಂತ್ರಿ ಆಗೋಕೆ ಅವಕಾಶ ಕೊಟ್ಟ ಸಿಎಂರವರಿಗೆ ಕೃತಜ್ಞತೆ ;ಕೆ.ಗೋಪಾಲಯ್ಯ

ಬೆಂಗಳೂರು: ನಮಗೆ ಮಂತ್ರಿ ಆಗೋಕೆ ಅವಕಾಶ ಮಾಡಿಕೊಟ್ಟಿದ್ದರಿಂದ ಸಿಎಂ ಯಡಿಯೂರಪ್ಪ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಅವರು ಹೇಳಿದರು.

ನಗರದಲ್ಲಿಂದು ಸಿಎಂ ಪುತ್ರ ವಿಜಯೇಂದ್ರ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ಯೋಗೇಶ್ವರ್ ಸೇರಿದಂತೆ ಮೂವರಿಗೆ ಸಚಿವ ಸ್ಥಾನ ನೀಡುವ ಕುರಿತು ನನಗೆ ಗೊತ್ತಿಲ್ಲ ಎಂದು ತಿಳಿಸಿದರು.

ಇನ್ನು ಮಾಮೂಲಿ ವಾರದಲ್ಲಿ ಮೂರು ದಿನ ಇಲ್ಲಿಗೆ ಬಂದು ಹೋಗುತ್ತೇನೆ, ವಾರಕ್ಕೆ ಎರಡು ಬಾರಿ ಅವರನ್ನು ಭೇಟಿ ಮಾಡುತ್ತೇನೆ, ಅದರಂತೆ ಇವತ್ತು ಕೂಡ ಭೇಟಿ ಮಾಡಿದ್ದೇನೆ, ಇದರಲ್ಲಿ ವಿಶೇಷತೆ ಏನಿಲ್ಲ ಎಂದು ಹೇಳಿದರು.

Share Post

Leave a Reply

Your email address will not be published. Required fields are marked *

error: Content is protected !!