ದುರ್ವರ್ತನೆ ತೋರಿದ ಆಸ್ಪತ್ರೆ ಸಿಬ್ಬಂದಿಗೆ ತರಾಟೆ

ಬಾಗಲಕೋಟೆ ಸುದ್ದಿ

ಫೆಬ್ರವರಿ, 14 – ಚಿಕಿತ್ಸೆಗಾಗಿ ಬರುವ ರೋಗಿಗಳೊಂದಿಗೆ ದುರ್ವರ್ತನೆ ತೋರಿದ ಜಿಲ್ಲಾಸ್ಪತ್ರೆ ಸಿಬ್ಬಂದಿಗೆ ರೋಗಿಗಳು ತರಾಟೆಗೆ ತೆಗೆದುಕೊಂಡ ಘಟನೆ ಬಾಗಲಕೋಟ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಸ್ಟಾಪ್ ನರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಪ್ರದೀಪ್ ಮಂಟೂರು ಎಂಬ ಸಿಬ್ಬಂದಿ ಚಿಕಿತ್ಸೆಗೆ ಬಂದ ಬಡ ರೋಗಿಗಳ ಮೇಲೆ ದುರ್ವರ್ತನೆ ತೋರಿದ್ದು ಇದರಿಂದ ಕೋಪಗೊಂಡ ರೋಗಿಗಳು ಮತ್ತು ಅವರ ಸಂಬಂಧಿಕರು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡು ಸಿಬ್ಬಂದಿಗಳ ಅನುಚಿತ ವರ್ತನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ಲೋಕಾಪುರ ಗ್ರಾಮದ ಮಲ್ಲಪ್ಪ ಎಂಬುವರು ಚಿಕಿತ್ಸೆ ಪಡೆಯಲು ಜಿಲ್ಲಾಸ್ಪತ್ರೆಗೆ ಬಂದಿದ್ದ ವೇಳೆಯಲ್ಲಿ ಸಿಬ್ಬಂದಿ ಕೆಲಸದ ಅವಧಿ ಮುಗಿದು ಹೋಗಿದೆ. ಈಗ ಔಷಧಿ ಸಿಗಲ್ಲ ಏನೂ ಸಿಗಲ್ಲ ಹೊರಗಡೆ ಹೋಗಿ ಎಂದು ಗದರಿದ್ದು, ಇದರಿಂದ ಕುಪಿತಗೊಂಡ ರೋಗಿ ಹಾಗೂ ರೋಗಿಯ ಸಂಬಂಧಿಕರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ನಂತರ ರೋಗಿಗಳನ್ನು ವೈದ್ಯಾಧಿಕಾರಿಗಳಗೆ ಭೇಟಿ ಮಾಡಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಇನ್ನು ದಿನನಿತ್ಯ ಜಿಲ್ಲಾ ಆಸ್ಪತ್ರೆಗೆ ಬರುವ ಬಡ ರೋಗಿಗಳ ಮೇಲೆ ಸಿಬ್ಬಂದಿಗಳು ಈ ರೀತಿ ದುರ್ವರ್ತನೆಯಿಂದ ನಡೆದುಕೊಳ್ಳುವುದು ಸರ್ವೇ ಸಾಮಾನ್ಯವಾಗಿದೆ.

ಜಿಲ್ಲಾ ವೈದ್ಯಾಧಿಕಾರಿಗಳು ರೋಗಿಯೊಡನೆ ಸಿಬ್ಬಂದಿಗಳು ಸರಿಯಾದ ರೀತಿಯಲ್ಲಿ ವರ್ತಿಸುವಂತೆ ಸೂಚಿಸಬೇಕು ಎಂದು ಒತ್ತಾಯಿಸಿದರು. ಅಲ್ಲದೇ ಅಂತಹ ಸಿಬ್ಬಂದಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ರೋಗಿಗಳು ಆಗ್ರಹಿಸಿದರು.

Share Post

Leave a Reply

Your email address will not be published. Required fields are marked *

error: Content is protected !!