ಹಿರಿಯ ಸಾಹಿತಿ ಪಾಟೀಲ‌ ಪುಟ್ಟಪ್ಪರ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ ಸುದ್ದಿ

ಫೆಬ್ರವರಿ, 14 -ಹಿರಿಯ ಸಾಹಿತಿ ಪಾಟೀಲ್ ಪುಟ್ಟಪ್ಪ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕೆಮ್ಮು ಹಾಗೂ ಕಫದ ಸಮಸ್ಯೆಯ ಕಾಣಿಸಿಕೊಂಡ ಹಿನ್ನಲೆಯಲ್ಲಿ ಪುಟ್ಟಪ್ಪ ಅವರನ್ನು ಹಿಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಪಾಪು ಅವರು ಕಳೆದ ನಾಲ್ಕು ದಿನಗಳಿಂದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಕೆಮ್ಮು, ಕಫ ಹೆಚ್ಚಾದ ಕಾರಣ ಇನ್ಫೆಕ್ಷನ್ ಆಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಕಿಮ್ಸ್ ನ ವಿಶೇಷ ವಾರ್ಡ್ ನಲ್ಲಿ ಇರಿಸಿ ಪಾಟೀಲ‌ ಪುಟ್ಟಪ್ಪ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Share Post

Leave a Reply

Your email address will not be published. Required fields are marked *

error: Content is protected !!