ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಉತ್ತರ ಪ್ರದೇಶದ ಪವಿತ್ರ ಧಾರ್ಮಿಕ ಶ್ರದ್ಧಾ ಕೇಂದ್ರ ವಾರಾಣಸಿಗೆ ಭೇಟಿ

ಬೆಂಗಳೂರು : ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಉತ್ತರ ಪ್ರದೇಶದ ಪವಿತ್ರ ಧಾರ್ಮಿಕ ಶ್ರದ್ಧಾ ಕೇಂದ್ರ ವಾರಾಣಸಿಗೆ ಭೇಟಿ ನೀಡಲಿದ್ದಾರೆ.

ವೀರಶೈವ ಧರ್ಮದ ಪಂಚಪೀಠಗಳಲ್ಲಿ ಒಂದಾದ ಕಾಶಿ ಪೀಠಕ್ಕೆ ಸೇರಿದ್ದ ವಾರಾಣಸಿಯ ಜಗದ್ಗುರು ವಿಶ್ವರಾಧ್ಯ ಗುರುಕುಲದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹ ಭಾಗಿಯಾಗಲಿದ್ದಾರೆ.

ವೀರ ಶೈವ ಧರ್ಮದ ಧರ್ಮಗ್ರಂಥವಾದ ಶ್ರೀಸಿದ್ಧಾಂತ ಶಿಖಾಮಣಿಯ 19 ಭಾಷೆಗಳ ಭಾಷಾಂತರ ಕೃತಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಗ್ರಂಥ ಮೊಬೈಲ್ ಆಯಪ್ ರೂಪದಲ್ಲಿ ಬಿಡುಗಡೆ ಆಗುತ್ತಿದ್ದು, ಇದನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಲಿದ್ದಾರೆ.

 

Share Post

Leave a Reply

Your email address will not be published. Required fields are marked *

error: Content is protected !!