Friday, August 14, 2020
Home ಚಾಮರಾಜನಗರ ಕೊಳ್ಳೇಗಾಲ ಪರಿಸರ ಸಂರಕ್ಷಿಸಿ ಮುಂದಿನ ಪೀಳಿಗೆಗೆ ಕೊಡುಗೆ ನೀಡುವುದು ಪ್ರತಿಯೊಬ್ಬರ ಕರ್ತವ್ಯ

ಇದೀಗ ಬಂದ ಸುದ್ದಿ

ಪ್ರವಾಹ ಸಂತ್ರಸ್ಥರನ್ನು ಕುಡುಕರು ಎಂದ ಶ್ರೀಮಂತ ಪಾಟೀಲ...

ಪ್ರತಿ ಸಲವು ಮಳೆಗಾಲದ ಸಮಯದಲ್ಲಿ ಪ್ರವಾಹ  ಉಂಟಾಗುತ್ತಿದ್ದು ಕೃಷ್ಣಾ ನದಿ ತೀರದ ಗ್ರಾಮಗಳ ಸಂತ್ರಸ್ತರಿಗೆ ಕೂಡಲೇ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಅಥಣಿ ಪಟ್ಟಣದಲ್ಲಿ ಸಿಐಟಿಯು ಕಟ್ಟಡ ಕಾರ್ಮಿಕ ಸಂಘಟನೆ...

ರಾಷ್ಟ್ರ ಧ್ವಜದ ತಯಾರಿಕಾ ಘಟಕಕ್ಕೆ ಬಿಸಿ ಮುಟ್ಟಿದ...

ಆಗಸ್ಟ್ 15 ಅಂದ್ರೆ ಇಡೀ ಭಾರತ ದೇಶವೇ ಸಂಭ್ರಮದ ದಿನ ,ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ರಾರಾಜಿಸುವ ನಮ್ಮ ರಾಷ್ಟ್ರ ಧ್ವಜ ಈ ಸಾರಿ ಅಷ್ಟು ಪ್ರಮಾಣದಲ್ಲಿ...

ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ಶೇ.೮೩.೧೧...

ಲಿಂಗಸೂಗೂರು: ತಾಲೂಕಿನ ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ೨೦೧೯-೨೦ನೇ ಸಾಲಿನ ಎಸ್,ಎಲ್,ಸಿ ಪರೀಕ್ಷೆಯಲ್ಲಿ ಶೇ.೮೩.೧೧ ರಷ್ಟು ಸಾಧನೆ ಮಾಡಿದೆ. ಕನ್ನಡ ಮಾಧ್ಯಮ ಪ್ರೌ ಢಶಾಲೆಯ ೮೩.೧೧ ರಷ್ಟು ಫಲಿತಾಂಶ...

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಪರಿಸರ ಸಂರಕ್ಷಿಸಿ ಮುಂದಿನ ಪೀಳಿಗೆಗೆ ಕೊಡುಗೆ ನೀಡುವುದು ಪ್ರತಿಯೊಬ್ಬರ ಕರ್ತವ್ಯ

ಚಾಮರಾಜನಗರ/ಕೊಳ್ಳೇಗಾಲ ಸುದ್ದಿ

ಫೆಬ್ರವರಿ,‌‌ 20 – ಯಾವುದೇ ರೀತಿಯಲ್ಲಿ ಪರಿಸರವನ್ನು ಹಾಳು ಮಾಡದೆ ಶುದ್ಧವಾಗಿಟ್ಟು ಮುಂದಿನ ಪೀಳಿಗೆಗೆ ಕೊಡುಗೆ ನೀಡಬೇಕು. ಇದು ನಮ್ಮ ನಮ್ಮೆಲ್ಲರ ಕರ್ತವ್ಯ ಎಂದು ವಲಯ ಅರಣ್ಯಾಧಿಕಾರಿ ರಾಜೇಶ್ ಘವಾಲ್ ಹೇಳಿದರು.

ಅವರು ಜೆಎಸ್‌ಬಿ ಪ್ರತಿಷ್ಠಾನದ ವತಿಯಿಂದ ಮಹದೇಶ್ವರ ಬೆಟ್ಟಕ್ಕೆ ಶಿವರಾತ್ರಿ ಹಿನ್ನಲೆ ದರ್ಶನಕ್ಕಾಗಿ ಕಾಲ್ನಡಿಗೆ ಮೂಲಕ ಹೋಗುವ ಭಕ್ತಾದಿಗಳಿಗೆ ಕೌದಳ್ಳಿ ಅರಣ್ಯ ವಲಯದಲ್ಲಿ ಆಯೋಜಿಸಲಾಗಿದ್ದ ಪರಿಸರದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಪರಿಸರ ಮಾಲಿನ್ಯ ತಡೆಗಟ್ಟುವ ಮೂಲಕ ನೈಸರ್ಗಿಕ ಸಂಪತ್ತನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡಬೇಕಾದುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು.

ಹೆಚ್ಚುತ್ತಿರುವ ಜನಸಂಖ್ಯೆ ನೈಸರ್ಗಿಕ ಸಂಪನ್ಮೂಲಗಳ ಅವನತಿಗೆ ಕಾರಣವಾಗಿದೆ. ಹೆಚ್ಚುತ್ತಿರುವ ಬೇಡಿಕೆ, ಅವೈಜ್ಞಾನಿಕ ವಿಧಾನಗಳ ಬಳಕೆ, ಸುಸ್ಥಿರವಲ್ಲದ ಕ್ರಮಗಳಿಂದಾಗಿ ಅರಣ್ಯಗಳು ಒತ್ತಡಕ್ಕೆ ಒಳಗಾಗಿವೆ. ಅರಣ್ಯ ನಾಶದಿಂದ ಮಣ್ಣಿನ ಸವಕಳಿ, ಭೂಕುಸಿತ, ಫಲವತ್ತತೆಯ ನಾಶ, ಜಲಾಶಯಗಳಲ್ಲಿ ಹೂಳು ತುಂಬುವಿಕೆ, ವನ್ಯಜೀವಿಗಳು ಮತ್ತು ಜೀವ ವೈವಿಧ್ಯ ನಾಶವಾಗುತ್ತಿದೆ. ಮಳೆಯ ಕೊರತೆಯಿಂದಾಗಿ ಬರಗಾಲ ಪರಿಸ್ಥಿತಿ, ಜಾಗತಿಕ ತಾಪಮಾನ ಏರಿಕೆ, ಪರಿಸರ ಅಸಮತೋಲನ, ಜೀವ ಸಂಕುಲಗಳು ವಿನಾಶದ ಅಂಚಿಗೆ ಸಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಅರಣ್ಯ ಅಧಿಕಾರಿ ಅನಂತರಾಮು ಮಾತನಾಡಿ, ಮನುಷ್ಯನ ದುರಾಸೆ, ಏರುತ್ತಿರುವ ಜನಸಂಖ್ಯೆ, ವೈಭವೋಪೇತ ಜೀವನದ ಬಯಕೆಗಳು ಪರಿಸರವನ್ನು ಹಾಳುಮಾಡುತ್ತಿವೆ. ನಮ್ಮ ಸುತ್ತಮುತ್ತಲಿನ ನೀರು, ಗಾಳಿ, ಭೂಮಿ, ಎಲ್ಲವೂ ಇಂದು ಅತೀ ಹೆಚ್ಚು ಕಲುಷಿತಗೊಳ್ಳುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.
ಪರಿಸರ ಉಳಿವಿಗಾಗಿ ಪರಿಸರ ಪ್ರೇಮಿಗಳು, ವಿದ್ಯಾವಂತರು, ಸರ್ಕಾರಗಳು ಕಾಲದಿಂದ ಕಾಲಕ್ಕೆ ಅನೇಕ ಕ್ರಮಗಳನ್ನು ಕೈಗೊಳ್ಳುತ್ತ ಬಂದಿದ್ದಾರೆ. ಆದರೂ ಪರಿಸರ ಮಾಲಿನ್ಯ ತಡೆಗಟ್ಟಲು ಸಾಧ್ಯವಾಗುತ್ತಿಲ್ಲ ಎಂದರು.

ವಾಯುಮಾಲಿನ್ಯ, ಗಾಳಿಯಿಲ್ಲದಿದ್ದರೆ ಜೀವಸಂಕುಲ ಒಂದು ಕ್ಷಣವೂ ಈ ಭೂಮಿಯ ಮೇಲೆ ಇರಲು ಸಾಧ್ಯವಿಲ್ಲ. ಇಂತಹ ವಾಯುವು ಕಾಡ್ಗಿಚ್ಚು, ಪ್ಲಾಸ್ಟಿಕ್ ಮತ್ತಿತರೆ ವಸ್ತುಗಳನ್ನು ಸುಡುವುದರಿಂದ ವಿಷವಾಗುತ್ತಿದೆ. ನಾವೆಲ್ಲರೂ ಹೆಚ್ಚಿತ್ತು ಸಂಘಟಿತರಾಗಿ ಹೋರಾಡದಿದ್ದರೆ ನಮಗೆ ಉಳಿಗಾಲವಿಲ್ಲ ಎಂದರು.
ಜೆ ಎಸ್ ಬಿ ಪ್ರತಿಷ್ಠಾನದ ಅಧ್ಯಕ್ಷ ಎಸ್ ಶಶಿಕುಮಾರ್ ಮಾತನಾಡಿ, ಪಾದಯಾತ್ರೆಯ ಹೆಸರಲ್ಲಿ ನಮ್ಮ ಜನರು ಕಾಡನ್ನು, ನದಿ-ಕೆರೆ-ಕೊಳಗಳನ್ನು ಹಾಳು ಮಾಡುತ್ತಿದ್ದಾರೆ. ಕಾಡಿನಲ್ಲಿ ಹೋಗುವಾಗ ದಾರಿಯುದ್ದಕ್ಕೂ ಇವರು ಚೆಲ್ಲುವ ಪ್ಲಾಸ್ಟಿಕ್ ಬಾಟಲ್, ಪ್ಲಾಸ್ಟಿಕ್ ಚೀಲಗಳು ಮತ್ತು ಕವರ್ ಗಳು, ತಿಂಡಿ ತಿನಿಸುಗಳು ಮತ್ತಿತರೆ ತ್ಯಾಜ್ಯಗಳು ಪರಿಸರವನ್ನು ಇನ್ನಿಲ್ಲದ ರೀತಿಯಲ್ಲಿ ಹಾನಿಯನ್ನು ಉಂಟು ಮಾಡುತ್ತಿವೆ. ಇದು ನಿಲ್ಲಬೇಕು. ಸಂಬಂಧ ಪಟ್ಟ ಇಲಾಖೆಗಳು ಇದನ್ನು ತಡೆಗಟ್ಟುವ ಕೆಲಸ ಮಾಡುತ್ತಿದ್ದರೂ ಸಹ ಜನರ ಉಡಾಫೆ ವರ್ತನೆಯ ಜೊತೆಗೆ ಭಕ್ತಿಯ ಹೆಸರಲ್ಲಿ ಕಾಡಿನ ಪರಿಸರವನ್ನು ಮಲಿನ ಮಾಡುತ್ತಿದ್ದಾರೆ. ಅಂಥವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಭಕ್ತಾದಿಗಳಿಗೆ ಮತ್ತು ಸಾಮಗ್ರಿಗಳನ್ನು ಸಾಗಿಸುವ ವಾಹನಗಳಿಗೆ ಕರಪತ್ರ ಮತ್ತು ಬಿತ್ತಿ ಪತ್ರಗಳನ್ನು ನೀಡಿ ಜಾಗೃತಿ ಮೂಡಿಸಲಾಯಿತು. ಈ ವೇಳೆ ಕಾಮಿಡಿ ಖಿಲಾಡಿ ಖ್ಯಾತಿಯ ನಟಿ ನಯನ ಪರಿಸರ ಅರಿವು ಕಾರ್ಯಕ್ರಮದಲ್ಲಿ ಜತೆಯಾಗಿದ್ದರು.

ಕಾರ್ಯಕ್ರಮದಲ್ಲಿ ವಿವೇಕಾನಂದ ಸಂಸ್ಥೆಯ ರಾಜೇಶ್, ಅರಣ್ಯ ಇಲಾಖೆಯ ನಾಗರಾಜು ಹಾಗೂ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿಗಳು ಹಾಜರಿದ್ದರು.

TRENDING