ಜಮ್ಮು-ಕಾಶ್ಮೀರ; ಸೇನೆ ಹಾಗೂ ಸಿಆರ್ ಪಿಎಫ್ ಜಂಟಿ ಕಾರ್ಯಾಚರಣೆ

ಶ್ರೀನಗರ್: ಜಮ್ಮು-ಕಾಶ್ಮೀರದ ಭದ್ರತಾ ಪಡೆಗಳ ಮಹತ್ವದ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದೀನ್ ಉಗ್ರಗಾಮಿ ಸಂಘಟನೆಯ ನಾಯಕನನ್ನು ಶನಿವಾರ ಬಂಧಿಸಿದ್ದು, ಈತನನ್ನು ಜುನೈದ್ ಫಾರೂಖ್ ಪಂಡಿತ್ ಎಂದು ಗುರುತಿಸಲಾಗಿದೆ ಎಂದು ವರದಿ ತಿಳಿಸಿದೆ.

ಹಿಜ್ಬುಲ್ ಉಗ್ರ ಜುನೈದ್ ಹಲವಾರು ಭಯೋತ್ಪಾದಕ ಸಂಬಂಧಿತ ಘಟನೆಗಳಲ್ಲಿ ಬೇಕಾದ ವ್ಯಕ್ತಿಯಾಗಿದ್ದ. ಗುಪ್ತಚರ ಇಲಾಖೆ ನೀಡಿದ ಖಚಿತ ಮಾಹಿತಿ ಆಧಾರದ ಮೇಲೆ ಬಾರಾಮುಲ್ಲಾ ಜಿಲ್ಲೆಯ ಟಪ್ಪಾರ್ ಪಟ್ಟಾನ್ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯಲಾಯಿತು ಎಂದು ವರದಿ ವಿವರಿಸಿದೆ.

ಜಮ್ಮು ಕಾಶ್ಮೀರ ಪೊಲೀಸರು, ಸೇನೆ ಹಾಗೂ ಸಿಆರ್ ಪಿಎಫ್ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರನನ್ನು ಬಂಧಿಸಲಾಗಿದೆ. ಬಾರಾಮುಲ್ಲಾ ಡಿಐಜಿ ಎಂ.ಸುಲೇಮಾನ್ ಈ ಕುರಿತು ಮಾಹಿತಿ ನೀಡಿದ್ದು, ಹಿಜ್ಬುಲ್ ಮುಜಾಹಿದೀನ್ ಸಂಘಟನೆಯ ಸ್ಥಳೀಯ ಉಗ್ರ ಜುನೈದ್ ಫಾರೂಖ್ ನನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

ಬಂಧಿತ ಉಗ್ರನಿಂದ ಒಂದು ಚೀನಾ ತಯಾರಿಕೆಯ ಪಿಸ್ತೂಲ್, 13 ಜೀವಂತ ಗುಂಡುಗಳು, 2 ಮ್ಯಾಜಜೀನ್ಸ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜುನೈದ್ ವಿಚಾರಣೆ ಮುಂದುವರಿದಿದೆ ಎಂದು ಡಿಐಜಿ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದ್ದರು.

Share Post

Leave a Reply

Your email address will not be published. Required fields are marked *

error: Content is protected !!