OBC ವಿದ್ಯಾರ್ಥಿ ವೇತನ ದಿಢೀರ್ ರದ್ದು.?

2020-21 ರ ಬಜೆಟ್ ನಲ್ಲಿ ಅನುದಾನ ಹಂಚಿಕೆ ಮಾಡಿಲ್ಲ ಎಂಬ ಕಾರಣಕ್ಕೆ ಪ್ರಸಕ್ತ ಸಾಲಿನಲ್ಲಿ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸ್ವೀಕರಿಸುವುದನ್ನು ನಿಲ್ಲಿಸಿ ಎಂದು ಹಿಂದುಳಿದ ವರ್ಗಗಳ ನಿರ್ದೇಶನಾಲಯದ ಆಯುಕ್ತರು ಎಲ್ಲಾ ಜಿಲ್ಲೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಇದರಿಂದಾಗಿ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ 25 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಲಭ್ಯವಾಗುವುದು ಅನುಮಾನವಾಗಿದೆ. ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಎಚ್.ಎಂ. ರೇವಣ್ಣ ಈ ವಿಷಯವನ್ನು ಸದನದಲ್ಲಿ ಪ್ರಸ್ತಾಪಿಸಿದ್ದಾರೆ.

ಏಕಾಏಕಿ ಈ ರೀತಿ ಆದೇಶ ಹೊರಡಿಸಿರುವುದು ಸರಿಯಲ್ಲ ಎಂದು ಹೇಳಿರುವ ಎಚ್.ಎಂ. ರೇವಣ್ಣ, ಇದರಿಂದಾಗಿ ಹಿಂದುಳಿದ ವರ್ಗಗಳ ಸಮುದಾಯದ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದಿದ್ದಾರೆ.

 

Share Post

Leave a Reply

Your email address will not be published. Required fields are marked *

error: Content is protected !!